ಬೆಂಗಳೂರು: ಒಂದೆಡೆ ಇಂದು ಸಂಜೆ ವಿಶ್ವಾಸ ಮತ ಸಾಬೀತು ಪಡಿಸುತ್ತೇವೆ ಅಂತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳುತ್ತಿದ್ದರೆ ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಜಯ ಸಿಗುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ, “3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಬಹುಮತವಿಲ್ಲದೆ ಸಂವಿಧಾನ ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧ. ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ಬರೆದುಕೊಂಡಿದ್ದಾರೆ.
3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಬಹುಮತವಿಲ್ಲದೆ ಸಂವಿಧಾನ ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧ.
ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ.
— Siddaramaiah (@siddaramaiah) May 19, 2018
ಒಟ್ಟಿನಲ್ಲಿ 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಬಿಜೆಪಿ ಬಹುಮತ ಸಾಧಿಸಿದ್ರೂ ಪ್ರಮಾಣ ವಚನ ಸ್ವೀಕಾರ ವಿಚಾರ ಸುಪ್ರೀಂ ಮೆಟ್ಟಿಲೇರಿತ್ತು. ಬಿಎಸ್ ವೈ ಅವರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲು ಅನುಮತಿ ನಿಡಿದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ತ್ರಿ ಸದಸ್ಯ ಪೀಠ ಇಂದು ಸಂಜೆಯೊಳಗೆ ಬಿಜೆಪಿ ವಿಶ್ವಾಸ ಮತ ಯಾಚನೆ ಮಾಡಬೇಕು ಅಂತ ಆದೇಶಿಸಿದೆ.
ಇಷ್ಟೆಲ್ಲ ಇದ್ದರೂ ಕೂಡ ಬಿಜೆಪಿಯವರೇ 15 ದಿನ ಕಾಲಾವಕಾಶ ಕೋರದಿದ್ದರೂ, ಮಾನ್ಯ ರಾಜ್ಯಪಾಲರು ಅವರಿಗೆ 15 ದಿನ ಕಾಲಾವಕಾಶ ನೀಡಿರುವುದರ ಹಿಂದೆ ಮೋದಿ ಹಾಗೂ ಅಮಿತ್ ಶಾ ಅವರ ಸೂಚನೆಯಿದೆ, ಹಾಗಾಗಿ ರಾಜ್ಯಪಾಲರು ಸಂವಿಧಾನ ಬಾಹಿರವಾಗಿ ಈ ರೀತಿಯ ತೀರ್ಮಾನ ಕೈಗೊಂಡಿದ್ದಾರೆ.
ಒಟ್ಟಿನಲ್ಲಿ ಇಂದು ಸುಪ್ರೀಂಕೋರ್ಟ್ ನಿರ್ಣಯ ನ್ಯಾಯದ ಪರವಾಗಿ ಬಂದಿದೆ.
— Siddaramaiah (@siddaramaiah) May 18, 2018