ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ನನ್ನ ಅಧಿಕಾರ ಸ್ಪಷ್ಟ ಆಗುವವರೆಗೂ ಮುಖ್ಯಮಂತ್ರಿಗಳು ವಿಶ್ವಾಸಮತ ಮುಂದೂಡಬೇಕು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರ. ಈ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ ಗೊಂದಲವಿದೆ. ಇದು ಸ್ಪಷ್ಟವಾಗುವವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು ಎಂದು ಹೇಳಿದ್ದಾರೆ.
Advertisement
ಶಾಸಕಾಂಗದ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ ಗೊಂದಲ ಇದೆ. ಇದು ಸ್ಪಷ್ಟವಾಗುವ ವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು.#KarnatakaPoliticalCrisis @INCKarnataka
— Siddaramaiah (@siddaramaiah) July 18, 2019
Advertisement
ವಿಪ್ ನೀಡಿಕೆಯ ಹಕ್ಕು ಸೇರಿದಂತೆ ಶಾಸಕಾಂಗ ಪಕ್ಷದ ನಾಯಕನ ಅಧಿಕಾರಕ್ಕೆ ರಕ್ಷಣೆ ನೀಡಿದ ಸಭಾಧ್ಯಕ್ಷರ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷಾಂತರ ನಿಷೇಧ ಕಾಯ್ದೆಯ ಮೂಲ ಆಶಯ ಈಡೇರಬೇಕಾದರೆ, ಶಾಸಕಾಂಗ ಪಕ್ಷದ ನಾಯಕರಿಗೆ ತಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡಲು ಅವಕಾಶ ಇರಲೇಬೇಕು ಎಂದು ತಿಳಿಸಿದ್ದಾರೆ.
Advertisement
ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾದ ನನ್ನ ಅಧಿಕಾರದ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪವಾಗಿದೆ. ಈ ಪ್ರಕರಣದಲ್ಲಿ ನಾನು ಪ್ರತಿವಾದಿ ಆಗದೆ ಇರುವ ಕಾರಣ ನನ್ನ ಅಭಿಪ್ರಾಯ ಮಂಡಿಸಲು ಸಾಧ್ಯವಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Advertisement
ವಿಪ್ ನೀಡಿಕೆಯ ಹಕ್ಕು ಸೇರಿದಂತೆ ಶಾಸಕಾಂಗ ಪಕ್ಷದ ನಾಯಕನ ಅಧಿಕಾರಕ್ಕೆ ರಕ್ಷಣೆ ನೀಡಿದ ಸಭಾಧ್ಯಕ್ಷರ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಮತ್ತು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.#KarnatakaPoliticalCrisis #Karnatakaassembysession @INCKarnataka
— Siddaramaiah (@siddaramaiah) July 18, 2019
ರಾಜ್ಯದ 15 ಶಾಸಕರ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆದರೆ ಈ ಆದೇಶದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡುವ ನನ್ನ ಹಕ್ಕನ್ನು ಹತ್ತಿಕ್ಕಿದಂತೆ ಕಾಣುತ್ತಿದೆ. ಈ ಬಗ್ಗೆ ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.
ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾದ
ನನ್ನ ಅಧಿಕಾರದ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪವಾಗಿದೆ.
ಆ ಪ್ರಕರಣದಲ್ಲಿ ನಾನು ಪ್ರತಿವಾದಿ ಆಗದೆ ಇರುವ ಕಾರಣ ನನ್ನ ಅಭಿಪ್ರಾಯ ಮಂಡಿಸಲು ಸಾಧ್ಯವಾಗಿಲ್ಲ.#KarnatakaPoliticalCrisis #Karnatakaassemblysession
— Siddaramaiah (@siddaramaiah) July 18, 2019