ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ (Sting Operation Case) ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ರಾಹುಲ್ ಗಾಂಧಿ (Rahul Gandhi) ಅವರನ್ನ ಭೇಟಿಯಾಗಿದ್ದಾರೆ.
ದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕರನ್ನ (LoP) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ಅವರನ್ನ ಭೇಟಿಯಾದ ಸಿದ್ದರಾಮಯ್ಯ (Siddaramaiah) ಅವರು, ಸ್ಟಿಂಗ್ ಆಪರೇಷನ್ ಪ್ರಕರಣ, ಇದರ ಸಂಬಂಧವಾಗಿ ರಾಜದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಇನ್ನೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರತಿದಿನ ಆರೋಪಗಳು ಮಾಡುತ್ತಾ ಹೋದ್ರೆ ಹೇಗೆ..? ಅವರಿಗೆ ಕೆಲಸ ಕಮ್ಮಿ.. ಈಗ ಮತ್ತೆ ಹಿಟ್ & ರನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಕಮಾರಸ್ವಾಮಿ ಸುದ್ದಿಗೋಷ್ಠಿ ಬೆನ್ನಲ್ಲೆ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ಮಾಡಿ ವಾಗ್ದಾಳಿ ಮಾಡಿದ್ದಾರೆ.
ಕುಮಾರಸ್ವಾಮಿ ಅವರಿಗೆ ಯಾಕಿಷ್ಟು ಆತುರ ಎಷ್ಟೇ ಸಣ್ಣ ಸಾಕ್ಷಿ ಸಿಕ್ಕರೂ ತನಿಖೆ ಮಾಡಿಸುತ್ತೇವೆ ಎಂದರು ದೆಹಲಿಯ ಹೆಚ್ಡಿಕೆ ವಿಳಾಸದಲ್ಲಿ ಮೊಬೈಲ್ ಪತ್ತೆ ವಿಚಾರ ಹೇಳಿದ್ದ ಪೊಲೀಸ್ ಕಮೀಷನರ್ ಹೇಳಿಕೆಗೆ ಧನಿಗೂಡಿಸಿದ ಪ್ರಿಯಾಂಕ್ ಖರ್ಗೆ ಇದಕ್ಕೆ ಸಂಬಂಧಿಸಿದ ಸಾಕ್ಷಿ ನಮ್ಮಲ್ಲಿದೆ. ಸರಿಯಾದ ಸಮಯದಲ್ಲಿ ಎಲ್ಲವನ್ನೂ ಹೇಳ್ತೇವೆ. ಚಾರ್ಜ್ಶೀಟ್ನಲ್ಲಿ ಎಲ್ಲವೂ ಬಯಲಾಗಲಿದೆ ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯನವರಿಗೆ ಸರ್ಕಾರದ ಮೇಲೆ ನಂಬಿಕೆ ಇದೆ. ನನ್ನ ಮೇಲೂ ನಂಬಿಕೆ ಇದೆ ಎಂದ ಪ್ರಿಯಾಂಕ್ ಹೇಳಿದರು.
