ಬೀದರ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳುವ ಬರದಲ್ಲಿ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಎಡವಟ್ಟು ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಎಡವಟ್ಟು ಮಾಡಿಕೊಂಡಿದ್ದಾರೆ.
ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎನ್ನಲು ಹೋಗಿ ನರೇಂದ್ರ ಮೋದಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದನ್ನು ಓದಿ : ದೇಶಕ್ಕಾಗಿ ರಾಹುಲ್ ಗಾಂಧಿ ಸತ್ತಿದ್ದಾರೆ- ಹೊಗಳುವ ಭರದಲ್ಲಿ ಸಿಎಂ ಇಬ್ರಾಹಿಂ ಎಡವಟ್ಟು
Advertisement
Advertisement
“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.
Advertisement
ಇದಕ್ಕೂ ಮುನ್ನ ಎಚ್.ಡಿ.ದೇವೇಗೌಡರ ಜೊತೆಗೆ ಪ್ರಚಾರ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ನಾನು ಹಾಗೂ ಎಚ್.ಡಿ.ದೇವೇಗೌಡರು ಒಟ್ಟಿಗೆ ಪ್ರಚಾರ ಮಾಡುತ್ತೇವೆ. ಲೋಕಸಭಾ ಚುನಾವಣೆಗಾಗಿ ಗುರು-ಶಿಷ್ಯರು ಮತ್ತೆ ಒಂದಾಗಿದ್ದೇವೆ ಎಂದು ತಿಳಿಸಿದರು.