ಬೆಂಗಳೂರು: ಇಂದು ಮೋದಿ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ರೈತ ಹಾಗೂ ಯುವಜನ ವಿರೋಧಿ ಬಜೆಟಾಗಿದೆ. ಈ ಎರಡೂ ವರ್ಗಕ್ಕೂ ಮೋದಿ ದ್ರೋಹ ಎಸಗಿದ್ದಾರೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರ ಬಜೆಟ್ 2019: 5 ಲಕ್ಷದವರೆಗೆ ತೆರಿಗೆ ವಿನಾಯ್ತಿ ಘೋಷಣೆ. ತೆರಿಗೆ ಘೋಷಣೆ ಆಗುತ್ತಿದ್ದಂತೆ ಮೋದಿ ಮೋದಿ ಎಂದು ಹರ್ಷೋದ್ಘಾರ
ಪಬ್ಲಿಕ್ ಟಿವಿ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ https://t.co/wP83GVKTHd#Budget2019 #Modi #PiyushGoyal #LoksabhaElection #Election2019 #Budget #InterimBudget2019_20 #NDA #BJP pic.twitter.com/5y8eV8VB4O
— PublicTV (@publictvnews) February 1, 2019
ಟ್ವೀಟ್ ನಲ್ಲೇನಿದೆ..?
2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ. ಎರಡೂ ವರ್ಗಕ್ಕೂ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ ಎಂದು ಬರೆದಿದ್ದಾರೆ. ಅಲ್ಲದೇ ಇದನ್ನು ಈಎನ್‍ಸಿ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ಪಿಯೂಶ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ 'ರೈತ ವಿರೋಧಿ' ಮತ್ತು 'ಯುವಜನ ವಿರೋಧಿ' ಆಗಿದೆ.
ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ. ಎರಡೂ ವರ್ಗಕ್ಕೂ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ.#Budget2019 @INCKarnataka
— Siddaramaiah (@siddaramaiah) February 1, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv