ಬೆಂಗಳೂರು: ಬಿಜೆಪಿಯವರು ದುರುದ್ದೇಶದಿಂದ, ಅಲ್ಪಸಂಖ್ಯಾತರ ಮೇಲಿನ ದ್ವೇಷದಿಂದ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಟಿಪ್ಪು ದಿನಾಚರಣೆ ರದ್ದು ಮಾಡಿದ್ದು ದೊಡ್ಡ ಅಪರಾಧ. ಟಿಪ್ಪು ಅಲ್ಪಸಂಖ್ಯಾತರಿಗೆ ಸಿಮಿತವಾದ ರಾಜನಲ್ಲ. ಮೈಸೂರಿನ ರಾಜನಾಗಿ ಬ್ರಿಟಿಷರ ಜೊತೆಗೆ ಹೋರಾಡಿದ ಅಪ್ರತಿಮ ದೇಶಪ್ರೇಮಿ. ಕೆಆರ್‍ಎಸ್ ನಿರ್ಮಾಣಕ್ಕೆ ಬುನಾದಿ ಹಾಕಿದ್ದೆ ಟಿಪ್ಪು ಎಂದು ಹೇಳಿದರು.
Advertisement
ಮೈಸೂರು ಭಾಗದಲ್ಲಿ ಕೈಗಾರಿಕೆಗೆ, ಕೃಷಿ, ವಾಣಿಜ್ಯಕ್ಕೆ ಟಿಪ್ಪು ಅನೇಕ ಕೊಡುಗೆ ನೀಡಿದ್ದಾರೆ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ಅವರ ಜಯಂತಿ ಆರಂಭಿಸಿದೇವು. ಇದರ ಹೊರತಾಗಿ ಬೇರೆ ಉದ್ದೇಶವನ್ನು ನಾವು ಹೊಂದಿರಲಿಲ್ಲ ಎಂದು ತಿಳಿಸಿದರು.
Advertisement
Advertisement
ಟಿಪ್ಪು ಜಯಂತಿ ರದ್ದುಗೊಳಿಸಿದ್ದು ಅತ್ಯಂತ ದೊಡ್ಡ ಅಪರಾಧ. ಇದು ಅಲ್ಪಸಂಖ್ಯಾತರ ವಿರೋಧಿ ನೀತಿ. ಇದಕ್ಕೆ ನಾನು ವಿರೋಧ ಮಾಡುತ್ತೇನೆ ಎಂದು ಹೇಳಿದರು.
Advertisement
2016 ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಮೊದಲು ಟಿಪ್ಪು ಜಯಂತಿಯನ್ನ ಅಲ್ಪಸಂಖ್ಯಾತ ಇಲಾಖೆಯಿಂದ ಆಚರಣೆ ಮಾಡಲಾಗುತ್ತಿದ್ದು, ಆ ಬಳಿಕ ಕನ್ನಡ ಸಂಸ್ಕøತಿ ಇಲಾಖೆಯಿಂದ ಜಯಂತಿ ಆಚರಿಸಲಾಗುತ್ತಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರವೂ ಆಚರಣೆಯನ್ನು ಮುಂದುವರಿಸಿತ್ತು.
2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಹೇಳಿತ್ತು. ಅಷ್ಟೇ ಅಲ್ಲದೇ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದರು.
— CM of Karnataka (@CMofKarnataka) July 30, 2019