ಮೈಸೂರು: ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿದ್ದು ಅಮಾನುಷ, ಹೇಯ ಕೃತ್ಯ. ಸರ್ಕಾರ ಸಹ ಉಗ್ರರ ಬಗ್ಗೆ ಮೃದು ಧೋರಣೆ ತೋರಬಾರದು. ಉಗ್ರರ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.
ಉಗ್ರರು ಅಡಗಿಕೊಂಡಿರುವ ತಾಣಗಳನ್ನು ಪತ್ತೆಹಚ್ಚಿ ಅವರನ್ನು ನಾಶಗೊಳಿಸಬೇಕು. ಉಗ್ರರ ನಾಯಕರುಗಳನ್ನು ಮೊದಲು ಹಿಡಿದು ನಾಶಪಡಿಸಬೇಕು. ಉಗ್ರರಿಗೆ ಹಣ ವರ್ಗಾವಣೆ ಆಗುತ್ತಿದೆ ಎಂದು ಪ್ರಧಾನಿ ಮೋದಿ ನೋಟ್ ಬ್ಯಾನ್ ಮಾಡಿದರು. ನೋಟು ಬ್ಯಾನ್ ನಿಂದ ಏನು ಲಾಭ ಆಯ್ತು? ಉಗ್ರರ ದಾಳಿ ಮಾತ್ರ ಕಡಿಮೆಯಾಗಿಲ್ಲ. ಕೇಂದ್ರ ಗುಪ್ತಚರ ಇಲಾಖೆ ವಿಫಲತೆ ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಲವತ್ತು ಯೋಧರು ವೀರಮರಣ ಹೊಂದಿದ್ದಾರೆ ಅಂದ್ರೆ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲಚವಾಗಿದೆ ಎಂದರ್ಥ. ಘಟನೆ ಸಮಯದಲ್ಲಿ 2 ಸಾವಿರಕ್ಕೂ ಅಧಿಕ ಯೋಧರು ಪ್ರಯಾಣಿಸುತ್ತಿದ್ದರು. ಯೋಧರು ನಮಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ಉಗ್ರರನ್ನು ಪತ್ತೆ ಮಾಡಬೇಕಿದೆ ಎಂದು ಆಗ್ರಹಿಸಿದರು.
https://www.youtube.com/watch?v=SZDaoFTiQg4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv