– ಸುಮಲತಾ ಬಗ್ಗೆ ಸಚಿವ ರೇವಣ್ಣ ಹೇಳಿಕೆ ಸರಿಯಿಲ್ಲ
– ಈಶ್ವರಪ್ಪನನ್ನು ಜನ ಹುಚ್ಚ ಅಂತಾರೆ
ಉಡುಪಿ: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ರಾಜಕೀಯದಲ್ಲಿ ಮುಂದುವರಿಯಲು ಯೋಗ್ಯ ವ್ಯಕ್ತಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಮಾಜಿ ಸಿಎಂ, ಅನಂತಕುಮಾರ್ ಹೆಗ್ಡೆ ಅವರಿಗೆ ಕಾನೂನು, ಸಂವಿಧಾನದ ಬಗ್ಗೆ ಜ್ಞಾನವಿಲ್ಲ. ಬಾಯಿಗೆ ಬಂದಂತೆ ಮಾತನಾಡುತ್ತಾನೆ. ಹೀಗಾಗಿ ಅಂತವರು ರಾಜಕಾರಣದಲ್ಲಿ ಇರಬಾರದು. ಅವರ ಬಗ್ಗೆ ಪ್ರತಿಕ್ರಿಯೆ ನೀಡದೇ ಇರುವುದು ಉತ್ತಮ ಎಂದು ಕುಟುಕಿದರು. ಇದನ್ನು ಓದಿ : ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ
ಸುಮಲತಾ ಅಂಬರೀಶ್ ಅವರ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಸರಿಯಿಲ್ಲ. ಇಟ್ ಈಸ್ ನಾಟ್ ಇನ್ ಗುಡ್ ಟೇಸ್ಟ್ ಎಂದ ಅವರು, ಮಂಡ್ಯದಲ್ಲಿ ಬಹುತೇಕ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಇರಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ 20 ಸೀಟು ಗೆಲ್ಲುತ್ತೇವೆ. ನಾವು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ಭಾರತೀಯ ಸೇನೆಯನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿದೆ. ಈ ಹಿಂದೆ ಯುದ್ಧಗಳು ಆಗಿದೆ. ಪಾಕಿಸ್ತಾನದ ಜೊತೆ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಸೇನೆಯನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಯೋಧರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿರುತ್ತಾರೆ. ಯಾವುದೇ ಪಕ್ಷ ಇದರ ಲಾಭ ತೆಗೆದುಕೊಳ್ಳಬಾರದು ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದರು.
ನಾನು ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಕೊಪ್ಪಳದಿಂದ ಸ್ಪರ್ಧೆಸುತ್ತೇನೆ ಎನ್ನುವುದು ಸುಳ್ಳು ಎಂದ ಅವರು, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈ ಹಿಂದೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಸೋತಿದ್ದರು. ಆದಲೇ ರಾಜಕೀಯ ಸನ್ಯಾಸ ತಗೆದುಕೊಳ್ಳಬೇಕಿತ್ತು. ಈಗ್ಯಾಕೆ ಸವಾಲಿನ ಮಾತು. ಜನ ಈಶ್ವರಪ್ಪನನ್ನು ಹುಚ್ಚರು ಅಂತಾರೆ ಎಂದು ವ್ಯಂಗ್ಯವಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv