ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಸಂಕ್ರಾಂತಿ ಹಬ್ಬ ಸಂಭ್ರಮಕ್ಕಿಂತ ಆಪರೇಷನ್ ಕಮಲದ ಭೀತಿಯೇ ಹೆಚ್ಚಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದರೆ, ಸಿಎಂ ಕುಮಾರಸ್ವಾಮಿ ಯಾರನ್ನು ಭೇಟಿಯಾಗದೇ ಮನೆಯಲ್ಲಿ ಉಳಿದಿದ್ದಾರೆ.
ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿರುವ ಬಿಜೆಪಿ ನಡೆಯನ್ನು ಖಂಡಿಸಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿರುವ ಸಿದ್ದರಾಮಯ್ಯ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕುಳಿತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದಿದ್ದಾರೆ.
Advertisement
Advertisement
ಇತ್ತ ಕುಮಾರಸ್ವಾಮಿ ಅವರು ನಮ್ಮ ನಿವಾಸದಲ್ಲಿಯೇ ಉಳಿದಿದ್ದು, ಯಾರೊಬ್ಬರಿಗೂ ಮನೆಯ ಒಳಗೆ ಬಿಡದಂತೆ ಸೂಚನೆ ನೀಡಿದ್ದಾರಂತೆ. ಹೀಗಾಗಿ ಅವರು ಆಪರೇಷನ್ ಕಮಲದ ಭೀತಿಯಿಂದಾಗಿ ಟೆನ್ಶನ್ಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.
Advertisement
ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಮಧ್ಯರಾತ್ರಿಯೇ ನಗರಕ್ಕೆ ಆಗಮಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿರುವ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv