ಬೆಂಗಳೂರು: ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಬಿಎಸ್‍ವೈ ಅವರು ಮಾತನಾಡಿದ ವಿಡಿಯೋ ಸಮೇತ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಎಸ್‍ವೈ ಹೇಳಿಕೆ ಸಂಶಯ ಹುಟ್ಟುವಂತೆ ಮಾಡಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ಟ್ವೀಟನ್ನು ಯಡಿಯೂರಪ್ಪ, ಬಿಜೆಪಿ ಇಂಡಿಯಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ.
Advertisement
Advertisement
ಟ್ವೀಟ್ ನಲ್ಲೇನಿದೆ..?
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಸಾವಿನಲ್ಲಿ ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಅವರ ಹೇಳಿಕೆ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ಉದ್ದೇಶದ ಬಗ್ಗೆ ಸಂಶಯ ಹುಟ್ಟುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಈ ಮೂಲಕ ಒತ್ತಾಯಿಸಿದ್ದಾರೆ.
Advertisement
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಸಾವಿನಲ್ಲಿ ರಾಜಕೀಯ ಲಾಭ ಕಾಣುತ್ತಿರುವ @BSYBJP ಅವರ ಹೇಳಿಕೆ ಅಧಿಕಾರದಲ್ಲಿರುವ @BJP4Indiaದ ಉದ್ದೇಶದ ಬಗ್ಗೆ ಸಂಶಯ ಹುಟ್ಟುವಂತೆ ಮಾಡಿದೆ. ಪ್ರಧಾನಿ @narendramodi ಅವರು ಇದಕ್ಕೆ ಸ್ಪಷ್ಟೀಕರಣ ನೀಡಬೇಕು.#BJPsPlot4Vote @INCKarnataka pic.twitter.com/7GbQuaBYMh
— Siddaramaiah (@siddaramaiah) February 28, 2019
Advertisement
ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು.
Shocking & disgusting to understand #BJPsPlot4Vote. It is unfortunate that @BJP4India is calculating electoral gains even before the dust has settled. No patriot shall derive such sadistic gains over soldiers' death, only a anti-nationalist can.
What will RSS say about this? pic.twitter.com/w6wAhAg6gv
— Siddaramaiah (@siddaramaiah) February 28, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv