ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಪರ ನಿಂತಿದ್ದಾರೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ 11 ಮಂದಿ ಆಪ್ತರ ಮೇಲೆ ಸಿಬಿಐ ಕೋರ್ಟ್ ಸರ್ಚ್ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ.
Advertisement
ಆದಾಯ ತೆರಿಗೆ ಪ್ರಕರಣದಲ್ಲಿ ಸಿಬಿಐ 82ನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪುಷ್ಪಾಂಜಲಿ ದೇವಿ ಅವರು ಸರ್ಚ್ ವಾರೆಂಟ್ ಹೊರಡಿಸಿದ್ದರು. ಬುಧವಾರ ಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಹಾಜರಾಗಿದ್ದರು. 11 ಜನರಲ್ಲಿ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಇಬ್ಬರ ಹೆಸರಿಲ್ಲ. ಆದ್ದರಿಂದ ಈ ಬಗ್ಗೆ ಸಿದ್ದರಾಮಯ್ಯ ಅವರು ಡಿಕೆಶಿ ಬೆನ್ನಿಗೆ ನಿಂತಿದ್ದು, ಡಿಕೆಶಿ ಪರ ಟ್ವೀಟ್ ಮಾಡಿ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
Advertisement
ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ.@INCKarnataka @INCIndia
— Siddaramaiah (@siddaramaiah) June 1, 2018
Advertisement
ಟ್ವೀಟ್ ನಲ್ಲೇನಿದೆ?:
“ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ” ಎಂದು ಬರೆದುಕೊಂಡಿದ್ದಾರೆ.
Advertisement
ಅಷ್ಟೇ ಅಲ್ಲದೇ “ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲು ದೇಶದ ಜನತೆ ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ. ಇದು ಮೋದಿ ಅವರಿಗಾಗಿರುವ ವೈಯಕ್ತಿಕ ಹಿನ್ನಡೆಯೂ ಹೌದು, 2019 ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು” ಅಂತ ಮಾಜಿ ಸಿಎಂ ಗರಂ ಆಗಿದ್ದಾರೆ.
ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲು ದೇಶದ ಜನತೆ ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ. ಇದು ಮೋದಿ ಅವರಿಗಾಗಿರುವ ವೈಯಕ್ತಿಕ ಹಿನ್ನಡೆಯು ಹೌದು,2019 ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು.@INCKarnataka
— Siddaramaiah (@siddaramaiah) May 31, 2018