ನವದೆಹಲಿ: ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ನಿಗಮ ಮಂಡಳಿ ಸಚಿವ ಸ್ಥಾನ ಒಟ್ಟಿಗೆ ಭರ್ತಿಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಕ್ಷಣ ಮಾಡಬೇಕು ಅಂದುಕೊಂಡಿದ್ವಿ. ಆದರೆ ಈ ಮಧ್ಯೆ ಆಷಾಢ ಬೇರೆ ಬಂದಿದೆ. ಹಾಗಾಗಿ ಸ್ವಲ್ಪ ತಡವಾಗಿದೆ. ಆದ್ದರಿಂದ ಆಷಾಢ ಮುಗಿದ ಬಳಿಕ ಸಚಿವ ಸಪುಟ ವಿಸ್ತರಣೆಯನ್ನು ಮಾಡುತ್ತೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
Advertisement
Advertisement
30 ನಿಗಮ ಮಂಡಳಿ ಏಕಕಾಲದಲ್ಲಿ ಭರ್ತಿ ಮಾಡಲಾಗುವುದು. 20 ಕಾಂಗ್ರೆಸ್ ಮತ್ತು 10 ಜೆಡಿಎಸ್ ಗೆ ಹಂಚಿಕೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಹೋಗುತ್ತೇವೆ. ಯಾರು ಲೋಕಸಭೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿಲ್ಲ. ವಿಧಾನ ಪರಿಷತ್ ಸಭಾಪತಿ ಆಯ್ಕೆ ಬಗ್ಗೆ ಇನ್ನು ಫೈನಲ್ ಆಗಿಲ್ಲ. ಜಿಲ್ಲಾ ಉಸ್ತುವಾರಿ ನೇಮಕ ಬಗ್ಗೆ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
Advertisement
ಇಂದು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರನ್ನು ತುಘಲಕ್ ಲೇನ್ ನಲ್ಲಿ ನಿವಾಸದಲ್ಲಿ ಭೇಟಿ ಮಾಡಿ ಪ್ರಸ್ತುತ ರಾಜಕೀಯ ಬೆಳವಣಿಗೆ ಮತ್ತು ಪರಿಷತ್ ಚುನಾವಣೆ ಹಾಗೂ ನಿಗಮ ಮಂಡಳಿ ನೇಮಕ ಕುರಿತು ಚರ್ಚೆ ನಡೆಸಿದ್ದಾರೆ.