CinemaKarnatakaLatestMain PostSandalwood

ನಾಳೆ ‘ಡಿಯರ್ ವಿಕ್ರಮ್’ ಸಿನಿಮಾ ನೋಡಲಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ

Advertisements

ತೀಶ್ ನೀನಾಸಂ ನಟನೆಯ ಡಿಯರ್ ವಿಕ್ರಮ್ ಸಿನಿಮಾ ಇದೇ ಜೂನ್ 30 ರಂದು ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಪೂರ್ವಿಭಾವಿಯಾಗಿ ಸಿನಿಮಾ ತಂಡವು ಹಲವು ಗಣ್ಯರಿಗೆ ಈ ಚಿತ್ರವನ್ನು ವೀಕ್ಷಿಸಲು ಸಿದ್ಧತೆ ಮಾಡಿಕೊಂಡಿದ್ದು ನಾಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಿನಿಮಾವನ್ನು ವೀಕ್ಷಿಸಲಿದ್ದಾರೆ. ಇದೊಂದು ಜೀವಪರ ಕಥೆಯನ್ನು ಹೊಂದಿರುವ ಚಿತ್ರವಾಗಿದೆ. ಹಾಗಾಗಿ ಸಿದ್ದರಾಮಯ್ಯ ಅವರನ್ನು ಸಿನಿಮಾ ತಂಡ ಆಹ್ವಾನಿಸಿದೆ.

ನಿನ್ನೆಯಷ್ಟೇ ಸಿದ್ದರಾಮಯ್ಯ ಅವರನ್ನು ನಟ ಸತೀಶ್ ನೀನಾಸಂ, ನಿರ್ದೇಶಕ ನಂದೀಶ್ ಮತ್ತು ಲೇಖಕ ನಟರಾಜ್ ಹುಳಿಯಾರ್ ಭೇಟಿಯಾಗಿ ಸಿನಿಮಾ ವೀಕ್ಷಿಸುವಂತೆ ಆಹ್ವಾನಿಸಿದ್ದಾರೆ. ಈ ಕುರಿತು ಸ್ವತಃ ಸಿದ್ದರಾಮಯ್ಯ ಅವರೇ ಟ್ವೀಟ್‌ ಮಾಡಿದ್ದು, ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಚಟುವಟಿಕೆಗಳ ನಡುವೆ ಅವರು ಡಿಯರ್ ವಿಕ್ರಮ್ ಸಿನಿಮಾವನ್ನು ವೀಕ್ಷಿಸಲಿದ್ದಾರೆ.  ಇದನ್ನೂ ಓದಿ:ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

ನಂದೀಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸತೀಶ್ ನಾಯಕನಾಗಿ ನಟಿಸಿದ್ದಾರೆ. ಶ್ರದ್ಧಾ ಶ್ರೀನಾಥ್ ನಾಯಕಿ. ವಸಿಷ್ಠ ಸಿಂಹ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ವ್ಯವಸ್ಥೆಯ ವಿರುದ್ಧದ ಹೋರಾಟಗಾರನೊಬ್ಬನ ಕಥೆಯನ್ನು ಈ ಸಿನಿಮಾ ಹೊಂದಿದೆ ಎಂದು ಹೇಳಲಾಗುತ್ತಿದೆ.

Live Tv

Leave a Reply

Your email address will not be published.

Back to top button