ರಾಮನಗರ: ಬಿಡದಿ (Bidadi) ಹೋಬಳಿ ಕುರುಬರ ಸಂಘದ ವತಿಯಿಂದ ಬಿಡದಿ ನಗರದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ನೂತನ ಪ್ರತಿಮೆಯನ್ನು (Sangolli Rayanna Statue) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಲೋಕಾರ್ಪಣೆ ಮಾಡಿದರು.
ಬಳಿಕ ದೀಪ ಬೆಳಗುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಸಚಿವ ಹೆಚ್.ಸಿ. ಬಾಲಕೃಷ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಸೇರಿದಂತೆ ಕುರುಬ ಸಮುದಾಯದ ಹಲವು ಮುಖಂಡರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ನಗರಕ್ಕೆ ಚಿರತೆ ಎಂಟ್ರಿ; ಸಿಸಿಟಿವಿಯಲ್ಲಿ ದೃಶ್ಯ ಕಂಡು ಜನ ಆತಂಕ!
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಹೆಚ್.ಸಿ. ಬಾಲಕೃಷ್ಣ, ಬಿಡದಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಸತ್ತ ಮೇಲೂ ಜನಮಾನಸದಲ್ಲಿ ಜೀವಂತವಾಗಿರುವ ಮಹಾನ್ ವ್ಯಕ್ತಿ. ಮುಂದಿನ ಪೀಳಿಗೆಗೆ ಅವರ ದೇಶಭಕ್ತಿ ಹಾಗೂ ತ್ಯಾಗ ಸದಾ ಸ್ಫೂರ್ತಿಯಾಗಿದೆ ಎಂದರು. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಳ್ಳಾರಿ ಜೈಲಿನಿಂದ ಪರಾರಿ
ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುಣಗಾನ ಮಾಡಿದ ಬಾಲಕೃಷ್ಣ, ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರು ಆಗಮಿಸಿರುವುದು ನಮಗೆ ಹೆಮ್ಮೆ. ಅವರನ್ನು ಜನ ಪ್ರೀತಿಯಿಂದ ಅನ್ನರಾಮಯ್ಯ ಎಂದು ಕರೆಯುತ್ತಾರೆ. ಸಿದ್ದರಾಮಯ್ಯ ಬಡವರ ಪರ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ರಾಜ್ಯ ಸರ್ಕಾರ ಬಲಿಷ್ಠವಾಗಿದೆ. ಇಂದು ನಾನು ಮಂತ್ರಿಯಾಗಿದ್ದೇನೆ ಎಂದರೆ ಅದಕ್ಕೆ ಸಿದ್ದರಾಮಯ್ಯ ಆಶೀರ್ವಾದವೇ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ ಜೀವಂತವಾಗಿದೆ ಎಂದರೆ ಅದಕ್ಕೆ ಶಕ್ತಿ ತುಂಬಿದ್ದೇ ಸಿದ್ದರಾಮಯ್ಯ ಎಂದು ಹಾಡಿಹೊಗಳಿದರು. ಇದನ್ನೂ ಓದಿ: ಕೇಂದ್ರದ ಕ್ಷೇತ್ರ ಮರುವಿಂಗಡಣೆ ಬಿಲ್ಗೆ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಸ್ವಾಗತ


