ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕೊಪ್ಪಳ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇತ್ತೀಚೆಗಿನ ಸಮಾವೇಶ ಮುಗಿದ ಬಳಿಕ ಜಿಲ್ಲೆಯ ಕೈ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಸಿದ್ದರಾಮಯ್ಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಮೀಟಿಂಗ್ ಮಾಡಿದ್ದು, ಹೇಗಾದರೂ ಮಾಡಿ ಲೋಕಸಭಾ ಚುನಾವಣೆಯಲ್ಲಿ ರಾಜಶೇಖರ್ ಹಿಟ್ನಾಳ್ ನನ್ನು ಗೆಲ್ಲಿಸಬೇಕು. ಒಂದು ವೇಳೆ ಗೆಲ್ಲದೆ ಹೋದರೆ ನನಗೆ ಮುಖ ತೋರಿಸಬೇಡಿ ಎಂದು ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ವ್ಯಾಪ್ತಿಯ ಕೈ ನಾಯಕರಿಗೆ ವಾರ್ನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಸಿದ್ದರಾಮಯ್ಯ ಸುಮಾರು ಅರ್ಧಗಂಟೆಗಳ ಕಾಲ ಮಾಜಿ ಶಾಸಕರು ಮತ್ತು ಸಚಿವರೊಂದಿಗೆ ಮೀಟಿಂಗ್ ಮಾಡಿದ್ದು, ಸಭೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕುಷ್ಟಗಿ ಕೈ ಶಾಸಕ ಅಮರೆಗೌಡ ಬಯ್ಯಾಪೂರ್, ಕೊಪ್ಪಳ ಕೈ ಶಾಸಕ ರಾಘವೇಂದ್ರ ಹಿಟ್ನಾಳ್, ಜೆ.ಡಿ.ಎಸ್ ಮುಖಂಡರು ಭಾಗಿಯಾಗಿದ್ದರು.
Advertisement
ಈ ಮೀಟಿಂಗ್ ಗೆ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಗೈರಾಗಿದ್ದಾರೆ. ರಾಯರೆಡ್ಡಿ ನಡೆಯಿಂದ ಸಾಕಷ್ಟು ಅನುಮಾನ ಮೂಡಿಸಿದೆ. ಇದೇ ವೇಳೆ ಕೆಲ ನಾಯಕರು ಸಿದ್ದರಾಮಯ್ಯ ಮುಂದೆ ವಿಧಾನಸಭೆ ಸೋಲಿನ ಕಹಿ ತೋಡಿಕೊಂಡಿದ್ದಾರೆ. ಆಗ ಸಿದ್ದರಾಮಯ್ಯ ಆಗಿದ್ದನ್ನ ಮರೆತು ಬಿಡಿ, ಇದೀಗ ಒಟ್ಟಾಗಿ ಚುನಾವಣೆ ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.