ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna) ಮತ್ತೆ ಮಣಿಪಾಲ್ ಆಸ್ಪತ್ರೆಗೆ(Manipal Hospital) ದಾಖಲಾಗಿದ್ದಾರೆ.
ಎರಡು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ಎಸ್‌ಎಂ ಕೃಷ್ಣ ದಾಖಲಾಗಿದ್ದಾರೆ. ಕಳೆದ ಬಾರಿ ದೀರ್ಘ ಕಾಲದವರೆಗೂ ಆಸ್ಪತ್ರೆಗೆ ದಾಖಲಾಗಿ ಎಸ್‌ಎಂಕೆ ಚಿಕಿತ್ಸೆ ಪಡೆದಿದ್ದರು. ಇಂದು ಮತ್ತೆ ರೂಟಿನ್ ಚೆಕಪ್ ಮಾಡಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೂಟಿನ್ ಚೆಕಪ್ ಮಾಡಿ ಸೋಮವಾರ ಎಸ್‌ಎಂಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: US Presidential Election 2024 | ಬೆಟ್ಟಿಂಗ್ ಮಾರುಕಟ್ಟೆಯಲ್ಲಿ ಟ್ರಂಪ್‌ಗೆ ಮುನ್ನಡೆ
ಇನ್ನು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವೀಟ್ ಮಾಡಿದ್ದು, ಶೀಘ್ರವೇ ಎಸ್‌ಎಂಕೆ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅನಾರೋಗ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿಗಳು, ಮಾಜಿ ಮುಖ್ಯಮಂತ್ರಿಗಳಾದ ಎಸ್‌ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಿ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲೆಂದು ಹಾರೈಸುತ್ತೇನೆ ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಚಿನ್ನ ಕದ್ದು ತೀರ್ಥಹಳ್ಳಿಯಲ್ಲಿ ಹೂತಿಟ್ಟಿದ್ದ ಖತರ್ನಾಕ್ ಕಳ್ಳ!