ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌ವೈ ಕುಟುಂಬ

Public TV
1 Min Read
yediyurappa voting lok sabha elections 2024

ಶಿವಮೊಗ್ಗ: ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಿಕಾರಿಪುರ ತಾಲೂಕು ಕಚೇರಿಯ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಮಂಗಳವಾರ ಮತ ಚಲಾಯಿಸಿದರು.

ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಅವರು ಹುಚ್ಚರಾಯಸ್ವಾಮಿ ದರ್ಶನ ಪಡೆದರು. ರಾಘವೇಂದ್ರ ಸ್ವಾಮಿ ಮಠಕ್ಕೂ ಭೇಟಿ ನೀಡಿ ರಾಯರ ದರ್ಶನ ಪಡೆದರು. ನಂತರ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು.

ಮತದಾನದ ಬಳಿಕ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. ರಾಘವೇಂದ್ರ ಎರಡೂವರೆ ಲಕ್ಷ ಲೀಡ್‌ನಲ್ಲಿ ಗೇಲ್ತಾರೆ. ಇಂದು ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರದಲ್ಲಿ 14 ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 14 ಕ್ಷೇತ್ರಗಳ ಪೈಕಿ ಒಂದೆರಡರಲ್ಲಿ ಸಮಸ್ಯೆ ಇದೆ. ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಲು ರಾಜ್ಯದಿಂದ 25-26 ಸೀಟ್ ಗೆಲ್ಲಿಸಿ ಕೊಡುತ್ತೇವೆ ಎಂದು ತಿಳಿಸಿದರು.

Share This Article