ಬೆಳಗಾವಿ/ಬೆಂಗಳೂರು: ಹಿರಿಯ ಕಾಂಗ್ರೆಸ್ (Congress) ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್ (DB Inamdar) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಷ್ಟದ ಸಮಯದಲ್ಲಿ ನಮ್ಮನ್ನ ಕೈ ಬಿಟ್ಟಿದೆ – ಕಾಂಗ್ರೆಸ್‌ಗೆ ರಾಜೀನಾಮೆ ಘೋಷಿಸಿದ ಇನಾಮ್ದಾರ್ ಕುಟುಂಬ
ಇನಾಮ್ದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.
2023ರ ಚುನಾವಣೆಯಲ್ಲಿ ಡಿ.ಬಿ ಇನಾಮ್ದಾರ್ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಅನಾರೋಗ್ಯ ಕಾರಣದಿಂದ ಅವರ ಬದಲಿಗೆ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಇದನ್ನೂ ಓದಿ: ಯಾದಗಿರಿಯಲ್ಲಿ ಅಮಿತ್ ಶಾ ರೋಡ್ ಶೋ – ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ ಪರ ಮತಯಾಚನೆ