ಮಡಿಕೇರಿ: ಮಂಜಿನ ನಗರಿ ಮಡಿಕೇರಿಯ (Madikeri) ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ (Omkareshwara Temple) ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ (Suresh Raina) ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೇವಾಲಯಕ್ಕೆ ಆಗಮಿಸಿದ ರೈನಾ, ಕುಟುಂಬದ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ರುದ್ರಾಭಿಷೇಕ ನೆರವೇರಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಇತಿಹಾಸದಲ್ಲೇ ಮೊದಲು; ಟೈಮ್ ಔಟ್ ಎಫೆಕ್ಟ್ – ಚೆಂಡನ್ನು ಎದುರಿಸದೆಯೇ ಕ್ಲೀನ್ ಬೌಲ್ಡ್ ಆದ ಆಟಗಾರ್ತಿ
ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಆಗಮಿಸಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ, ಮಡಿಕೇರಿಯ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಿವನ ದರ್ಶನ ಪಡೆಯುವ ಉದ್ದೇಶದಿಂದ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಆಗಮಿಸಿದ ರೈನಾ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕುಟುಂಬದ ಸದಸ್ಯರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ರುದ್ರಾಭಿಷೇಕ ಮಾಡಿಸಿರುವ ಮಾಜಿ ಕ್ರಿಕೆಟಿಗ, ಕೆಲಕಾಲ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಮಡಿಕೇರಿ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಸುರೇಶ್ ರೈನಾ ಕುಟುಂಬ ವಾಸ್ತವ್ಯ ಹೂಡಿದೆ ಎನ್ನಲಾಗಿದ್ದು, ಕೊಡಗಿನ ಪ್ರವಾಸದ ನಡುವೆ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಬೀದರ್ನಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಜಾಂಟಿ ರೋಡ್ಸ್ ಚಾಲನೆ
ಕ್ರಿಕೆಟ್ ಮೈದಾನದಲ್ಲಿ ತಮ್ಮ ಆಟದ ಮೂಲಕ ಗಮನ ಸೆಳೆದಿದ್ದ ಸುರೇಶ್ ರೈನಾ, ಇದೀಗ ಕೊಡಗಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.
