ನವದೆಹಲಿ: ಮಾಜಿ ರಕ್ಷಣಾ ಮಂತ್ರಿ ಜಾರ್ಜ್ ಫರ್ನಾಂಡಿಸ್ (88) ವಿಧಿವಶರಾಗಿದ್ದಾರೆ.
ಜಾರ್ಜ್ ಫರ್ನಾಂಡಿಸ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಾರ್ಜ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.
ಬಹು ಅಂಗಾಂಗಗಳ ತೊಂದರೆಯಿಂದ ಜಾರ್ಜ್ ಫರ್ನಾಂಡಿಸ್ ಬಳಲುತ್ತಿದ್ದು, ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ದೆಹಲಿಯ ಅನೇಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ವೈದ್ಯರು ಜಾರ್ಜ್ ಫರ್ನಾಂಡಿಸ್ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ಈಗ ಎಷ್ಟೆ ಪ್ರಯತ್ನ ಮಾಡಿದರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ದುಃಖ ವ್ಯಕ್ತಪಡಿಸುತ್ತಿದ್ದಾರೆ.
ಮೊದಲಿಗೆ ಅವರು ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದರು. ಬಳಿಕ ಒಂದೊಂದೆ ಅಂಗಾಂಗ ವೈಫಲ್ಯವಾಗಿದ್ದು, ಇಂದು ಕೊನೆ ಉಸಿರೆಳೆದಿದ್ದಾರೆ. ಜಾರ್ಜ್ ಫರ್ನಾಂಡಿಸ್ ಅವರು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದರು. ತಮ್ಮ ಸಾಮಾಜಿಕ ಕೆಲಸಗಳಿಂದಲೇ ಒರ್ವ ಜನನಾಯಕನಾಗಿ ಗುರುತಿಸಿಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv