ನವದೆಹಲಿ: ದೀರ್ಘಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10.30ರ ವೇಳೆಗೆ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.55 ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 81 ವರ್ಷದ ಶೀಲಾ ದೀಕ್ಷಿತ್ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಮೂರು ಬಾರಿ ದೆಹಲಿ ಸಿಎಂ ಆಗಿದ್ದ ಅವರು 2019 ಲೋಕಸಭಾ ಚುನಾವಣೆಯಲ್ಲಿ ಅನಾರೋಗ್ಯದ ನಡುವೆಯೂ ಚುನಾವಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ದೆಹಲಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೇತೃತ್ವ ವಹಿಸಿಕೊಂಡು ಆಪ್ ಪಕ್ಷದೊಂದಿಗೆ ಮೈತ್ರಿಯನ್ನ ವಿರೋಧ ಮಾಡಿದ್ದರು. ಈಶಾನ್ಯ ದೆಹಲಿಯಿಂದ ಲೋಕಸಭೆ ಚುನಾವಣೆ ಸ್ವರ್ಧೆ ಮಾಡಿ 3.66 ಲಕ್ಷ ಮತಗಳನ್ನು ಪಡೆದುಕೊಂಡಿದ್ದರು.
ಚುನಾವಣೆಯ ಬಳಿಕ ಶೀಲಾ ದೀಕ್ಷಿತ್ ಸಾರ್ವಜನಿಕ ವಲಯದಿಂದ ದೂರ ಉಳಿದುಕೊಂಡಿದ್ದರು. 1998 ರಿಂದ 2013 ರ ವರೆಗೆ ಸಿಎಂ ಆಗಿ ಕಾರ್ಯ ನಿರ್ವಹಣೆ ಮಾಡಿದ್ದ ಅವರು ದೆಹಲಿಯಲ್ಲಿ ದೀರ್ಘಾವಧಿ ಸಿಎಂ ಆಗಿದ್ದ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಇದರೊಂದಿಗೆ ಕೇರಳದ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ಹಾಲಿ ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದರು. ಸದ್ಯ ಮಾಜಿ ಸಿಎಂ ನಿಧನಕ್ಕೆ ದೆಹಲಿ ಸ್ತಬ್ಧವಾಗಿದ್ದು, ದೇಶದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
Former Delhi Chief Minister & Congress leader Sheila Dikshit, passes away in Delhi at the age of 81 years. (file pic) pic.twitter.com/8rqv8qfnAQ
— ANI (@ANI) July 20, 2019