ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

Public TV
2 Min Read
LK Advani

– ಸೋಶಿಯಲ್ ಮೀಡಿಯಾಗಳಲ್ಲಿ ನಿಧನದ ವದಂತಿ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ (LK Advani) ಸಾವನ್ನಪ್ಪಿದ್ದಾರೆ ಎಂದು ವದಂತಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಅವರ ಆರೋಗ್ಯ (Health) ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಶುಕ್ರವಾರ ಅವರು ಅಪೊಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

96 ವರ್ಷ ವಯಸ್ಸಿನ ಅಡ್ವಾಣಿ ಅವರು ವಯೋಸಹಜ ಸಮಸ್ಯೆಯಿಂದ ಎರಡು ದಿನಗಳ ಹಿಂದೆ ದೆಹಲಿಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿಟ್ಟು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ಶುಕ್ರವಾರ ಸಂಜೆ ಡಿಸ್ಚಾರ್ಜ್ ಮಾಡಲಾಗಿತ್ತು. ಇದಕ್ಕೂ ಮುನ್ನ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ – ಬೊಮ್ಮಾಯಿ ಆರೋಪ

1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ ಅಡ್ವಾಣಿ ಜನಿಸಿದರು. ಭಾರತೀಯ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದ ಅಡ್ವಾಣಿ, 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಪ್ರಚಾರಕರಾಗಿ ಕೆಲಸ ಆರಂಭಿಸಿದ ಅವರು 1951ರಲ್ಲಿ ಆರ್‌ಎಸ್‌ಎಸ್‌ನ ರಾಜಕೀಯ ವಿಭಾಗವಾದ ಭಾರತೀಯ ಜನಸಂಘ ಸೇರಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ- ಪತ್ನಿ ಸ್ಪರ್ಧೆ ವದಂತಿಗೆ ಡಾ. ಮಂಜುನಾಥ್ ಸ್ಪಷ್ಟನೆ

1980ರಲ್ಲಿ ಜನತಾ ಪಕ್ಷದ ವಿಸರ್ಜನೆಯ ನಂತರ ಭಾರತೀಯ ಜನತಾ ಪಕ್ಷವನ್ನು ರಚಿಸಲಾಯಿತು. ಅಡ್ವಾಣಿ ಅದರ ಪ್ರಮುಖ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ಬಿಜೆಪಿಯ ಸಿದ್ಧಾಂತವನ್ನು ರೂಪಿಸುವಲ್ಲಿ ಮತ್ತು ಭಾರತದಾದ್ಯಂತ ಅದರ ನೆಲೆಯನ್ನು ವಿಸ್ತರಿಸುವಲ್ಲಿ ಅಡ್ವಾಣಿ ನಿರ್ಣಾಯಕ ಪಾತ್ರ ವಹಿಸಿದರು. 1990ರಲ್ಲಿ ರಾಮ ಮಂದಿರಕ್ಕಾಗಿ ರಾಷ್ಟ್ರವ್ಯಾಪಿ ರಥಯಾತ್ರೆ ಮಾಡಿದರು. 2002ರಿಂದ 2004ರವರೆಗೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

Share This Article