ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ (Kathua) ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಜಿ ಡಿಎಸ್ಪಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮೃತರನ್ನು ಡಿಎಸ್‌ಪಿ ಅವತಾರ್ ಕೃಷ್ಣ ರೈನಾ (81), ಮಗಳು ಬರ್ಖಾ ರೈನಾ (25), ಮಗ ತಕಾಶ್ (3), ಗಂಗಾ ಭಗತ್ (17), ಡ್ಯಾನಿಶ್ ಭಗತ್ (15) ಮತ್ತು ಅದ್ವಿಕ್ (6) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಲಿನ ಪ್ರೊತ್ಸಾಹ ಧನ ಸದ್ಯಕ್ಕೆ ಹೆಚ್ಚಳ ಇಲ್ಲ: ವೆಂಕಟೇಶ್
Advertisement
Advertisement
ಬುಧವಾರ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯೊಳಗೆ ದಟ್ಟ ಹೊಗೆ ಆವರಿಸಿದ ಪರಿಣಾಮ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಪ್ರಾಥಾಮಿಕ ತನಿಖೆಯ ಪ್ರಕಾರ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ