ನವದೆಹಲಿ: ಏಕದಿನ ವಿಶ್ವಪಕ್ ಟೂರ್ನಿ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್‍ನಿಂದ ದೂರ ಉಳಿದಿದ್ದು, ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಧೋನಿ ಯಾವಾಗ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಮರಳುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ ಸಿಕ್ಕಿದೆ.
ಧೋನಿ ಮುಂದಿನ ವರ್ಷದಿಂದ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಮರಳಲಿದ್ದಾರೆ. ಟಿ-20 ವಿಶ್ವಕಪ್‍ಗೆ ಸಿದ್ಧತೆ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ತವರಿನಲ್ಲಿ ಬಾಂಗ್ಲಾ ತಂಡದ ವಿರುದ್ಧ ಮೂರು ಪಂದ್ಯ ಆಟಲಿದೆ. ಆದರೆ ಟೂರ್ನಿಗೆ ಧೋನಿ ಅಲಭ್ಯರಾಗಿದ್ದಾರೆ. ಇದನ್ನೂ ಓದಿ: ಅಪ್ಪನ ಜೊತೆ ಹೊಸ ಜೀಪ್ ತೊಳೆದ ಧೋನಿ ಪುತ್ರಿ: ವಿಡಿಯೋ
Advertisement
Advertisement
ಸ್ಪರ್ಧಾತ್ಮಕ ಕ್ರಿಕೆಟ್‍ಗೆ ಎಂ.ಎಸ್.ಧೋನಿ ಅವರನ್ನು ಮರಳಿ ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷ ಸೌರವ್ ಗಂಗೂಲಿ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಆಯ್ಕೆ ಸಮಿತಿ ಹಾಗೂ ಟೀಂ ಮ್ಯಾನೇಜ್‍ಮೆಂಟ್ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಟಿ-20 ವಿಶ್ವಕಪ್‍ಗೆ ಧೋನಿ ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
2020ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಾಗೂ ಐಸಿಸಿ ಟಿ-20 ವಿಶ್ವಕಪ್‍ನಲ್ಲಿ ಎಂ.ಎಸ್.ಧೋನಿ ಭಾಗವಹಿಸಲಿದ್ದಾರೆ. ಇದು ಧೋನಿ ಹಾಗೂ ಕ್ರಿಕೆಟ್ ಅಭಿಮಾನಿಗಳಲ್ಲಿ ಖುಷಿ ತಂದಿದೆ.
Advertisement
ಟೀಂ ಇಂಡಿಯಾ 2020ರ ಜನವರಿ ತಿಂಗಳಲ್ಲಿ ಶ್ರೀಲಂಕಾ ಭಾರತ ಪ್ರವಾಸವನ್ನು ಕೈಗೊಳ್ಳಲಿದೆ. ಜೊತೆಗೆ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಆಡಲಿದೆ. ಬಳಿಕ ನಾಯಕ ವಿರಾಟ್ ಕೊಹ್ಲಿ ಪಡೆಯು ಆಸ್ಟ್ರೇಲಿಯಾ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಾದ ನಂತರ ನ್ಯೂಜಿಲೆಂಡ್ ಪ್ರವಾಸವನ್ನು ಕೈಗೊಳ್ಳಲಿದೆ.
ಟಿ-20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ 2020ರ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಡೆಯಲಿದೆ. ಈ ನಿಟ್ಟಿನಲ್ಲಿ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು, ಧೋನಿ ಅವರನ್ನು ಒಳಗೊಂಡಂತೆ ತಂಡ ಸಿದ್ಧ ಪಡಿಸಲು ಸೌರವ್ ಗಂಗೂಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.