ತನಗಿಂತ 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್

Public TV
1 Min Read
ARUN LAL MARRIAGE

ಕೋಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ನಿನ್ನೆ ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿ ಬುಲ್ ಬುಲ್ ಸಹಾಳನ್ನು ವರಿಸಿದ್ದಾರೆ.

arun lal 1

ಸೋಮವಾರ ಕೋಲ್ಕತ್ತಾದಲ್ಲಿ  ಬುಲ್ ಬುಲ್ ಶಾ ಅವರನ್ನು ಅರುಣ್ ಲಾಲ್ ಕೈಹಿಡಿದಿದ್ದಾರೆ. ಬಳಿಕ ನವದಂಪತಿ ಕೇಕ್ ಕಟ್ ಮಾಡಿದ್ದಾರೆ. ಇತ್ತ ಬುಲ್ ಬುಲ್ ಅವರು ಕೈಗೆ ಮೆಹಂದಿ ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೀಗ ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಅಲ್ಲದೆ ಕುಟುಂಬದವರಿಗೆ ಹಾಗೂ ಗೆಳೆಯರಿಗೆ ನವದಂಪತಿ ಸೋಶಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

arun lal 3

66 ವರ್ಷದ ಅರುಣ್ ಲಾಲ್ ಪ್ರಸ್ತುತ ಪಶ್ಚಿಮ ಬಂಗಾಳದ ಮುಖ್ಯ ಕೋಚ್ ಆಗಿದ್ದಾರೆ. ವರದಿಗಳ ಪ್ರಕಾರ, ಲಾಲ್ ಮತ್ತು ಸಹಾ ಬಹುಕಾಲದಿಂದ ಸಂಬಂಧ ಹೊಂದಿದ್ದರು. ಲಾಲ್ ಅವರ ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರವೇ ಅವರು ಈ 2ನೇ ಮದುವೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

arun lal 2

ಈಗಾಗಲೇ ಅವರು ತಮ್ಮ ಮೊದಲ ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮೊದಲ ಪತ್ನಿಯೊಂದಿಗೆ ಸದ್ಯಕ್ಕೆ ಲಾಲ್ ವಾಸಿಸುತ್ತಿದ್ದಾರೆ. ಲಾಲ್ ಅವರ ಮುದುವೆಯ ಆಮಂತ್ರಣ ಪತ್ರಿಕೆಯ ಚಿತ್ರವೂ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಭಾರೀ ಸುದ್ದಿಯಾಗಿತ್ತು.

arun lal 5

ಅರುಣ್ ಲಾಲ್ ಅವರು ಭಾರತಕ್ಕಾಗಿ ಒಟ್ಟು 29 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 850 ರನ್‍ಗಳನ್ನು ಗಳಿಸಿದ್ದಾರೆ ಮತ್ತು 7 ವಿಕೆಟ್‍ಗಳನ್ನು ಕಬಳಿಸಿದ್ದಾರೆ. ನಂತರ ಅವರು 2016ರಲ್ಲಿ ದವಡೆಯ ಕ್ಯಾನ್ಸರ್‌ ಗೆ ಒಳಗಾಗಿದ್ದರು. ಮೊದಲು ಬಹುಪಾಲು ದೇಶೀಯ ಮತ್ತು ಅಂತರಾಷ್ಟ್ರೀಯ ಪಂದ್ಯಗಳಿಗೆ ಕಾಮೆಂಟರಿ ಬಾಕ್ಸ್ ನಲ್ಲಿ ಪ್ರಮುಖ ಮುಖವಾಗಿದ್ದವರು.

Share This Article
Leave a Comment

Leave a Reply

Your email address will not be published. Required fields are marked *