ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಮಾಜಿ ಅಧ್ಯಕ್ಷ ಲಲಿತ್ ಮೋದಿ (Lalit Modi) ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಕೊರೊನಾ (Corona) ಸೋಂಕಿಗೆ ತುತ್ತಾಗಿ ಖಾಸಗಿ ಆಸ್ವತ್ರೆಗೆ ದಾಖಲಾಗಿದ್ದಾರೆ.
Advertisement
ಲಲಿತ್ ಮೋದಿ ಕೆಲದಿನಗಳಿಂದ ಕೊರೊನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಪ್ರತಿಭಾವಂತ ಕ್ರಿಕೆಟರ್ ಸಿದ್ಧಾರ್ಥ್ ಶರ್ಮಾ ನಿಧನ
Advertisement
Advertisement
ಆನಾರೋಗ್ಯದ ಕುರಿತಾಗಿ ಸ್ವತಃ ಲಲಿತ್ ಮೋದಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ (Covid-19) ಸೋಂಕಿಗೆ ಒಳಗಾಗಿದ್ದೇನೆ. ಇದರ ಜೊತೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನನ್ನು ಏರ್ ಆಂಬುಲೆನ್ಸ್ ಮೂಲಕ ಕರೆತರಲಾಗಿತ್ತು. ನನ್ನ ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿದ ಇಬ್ಬರು ವೈದ್ಯರು ಮತ್ತು ಮಗನಿಗೆ ಧನ್ಯವಾದ ತಿಳಿಸಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: 18 ತಿಂಗಳ ಬಳಿಕ ರಾಷ್ಟ್ರೀಯ ತಂಡದ ಕರೆ ಪಡೆದ ಪೃಥ್ವಿ ಶಾ – ಕೊಹ್ಲಿ, ರೋಹಿತ್ಗಿಲ್ಲ ಟಿ20 ತಂಡದಲ್ಲಿ ಸ್ಥಾನ
Advertisement
View this post on Instagram
ಲಲಿತ್ ಮೋದಿ ಐಪಿಎಲ್ ಆರಂಭಿಕ ಸೀಸನ್ಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಹರಾಜು ಮತ್ತು ಟೆಂಡರ್ನಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದ ಬಳಿಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದರು. ಆ ಬಳಿಕ ಲಂಡನ್ನಲ್ಲಿ ನೆಲೆಸಿದ್ದ ಲಲಿತ್ ಮೋದಿ ಕೆಲ ತಿಂಗಳ ಹಿಂದೆ ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಜೊತೆ ಡೇಟಿಂಗ್ ವಿಚಾರ ಬಿಟೌನ್ನಲ್ಲಿ ಭಾರೀ ಸದ್ದು ಮಾಡಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k