ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆ (62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಪಾನ್ ಸರ್ಕಾರ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ.
Advertisement
ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಹಿಂದಿನಿಂದ ವ್ಯಕ್ತಿಯೊಬ್ಬ ಶೂಟ್ ಮಾಡಿದ್ದ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು
Advertisement
Another angle of former Japan Prime Minister shooting aftermath video:#shinzoabe
— Chicago60614 (@Chicago60614) July 8, 2022
Advertisement
ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಜಪಾನ್‌ನ ದೀರ್ಘ ಕಾಲದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಜಪಾನ್ ಕಾಲಮಾನ ಬೆಳಗ್ಗೆ 11 ಗಂಟೆಗೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗ 2 ಬಾರಿ ಶೂಟ್ ಮಾಡಿ ಮಾಡಲಾಗಿತ್ತು.
Advertisement
ಜಪಾನ್ ಸಂಸತ್ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಅವರ ಹಿಂದೆ ಸ್ವಲ್ಪ ದೂರದಲ್ಲೇ ನಿಂತಿದ್ದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತ ಶಿಂಜೋ ಅಬೆ ಹತ್ಯೆ ಮಾಡಿದ್ದಾನೆ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿ ಎಂದು ಗುರುತಿಸಲಾಗಿದೆ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಿಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನು ವರದಿಯಾಗಿಲ್ಲ.
ಆಸ್ಪತ್ರೆ ದಾಖಲಿಸುವ ವೇಳೆಗೆ ಅವರ ಉಸಿರಾಟ ನಿಂತು ಹೋಗಿತ್ತು. ಅದಾಗ್ಯೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ವೈದ್ಯರು ಮಾಡಿದರು. ಆದರೆ ಯಾವ ಚಿಕಿತ್ಸೆಗೆ ಸ್ಪಂಧಿಸದ ಹಿನ್ನಲೆ ಜಪಾನ ಕಾಲ ಮಾನದ ಪ್ರಕಾರ ಸಂಜೆ ಐದು ಗಂಟೆಗೆ ಅವರ ಸಾವಿನ ಸುದ್ದಿಯನ್ನು ಅಧಿಕೃತಗೊಳಿಸಲಾಯಿತು.
Live Tv
[brid partner=56869869 player=32851 video=960834 autoplay=true]