ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರ ಆರೋಗ್ಯದಲ್ಲಿ (Health) ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ ಮಾಡುತ್ತೇವೆ ಎಂಬುದಾಗಿ ಎಸ್.ಎಂ.ಕೃಷ್ಣ ನಿವಾಸದಿಂದ ಸಂದೇಶ ಬಂದಿದೆ.
ಶ್ವಾಸಕೋಶದ (Lungs) ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ (Chief Minister) ಎಸ್.ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಿಸಲಾಗಿದೆ. ಡಾ.ಸತ್ಯನಾರಾಯಣ್ ಮತ್ತು ಡಾ.ಸುನೀಲ್ ಕಾರಂತ್ ವೈದ್ಯರ ತಂಡದಿಂದ ಐಸಿಯುನಲ್ಲಿ ಚಿಕಿತ್ಸೆ (Treatment) ನೀಡಲಾಗುತ್ತಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್ (K Sudhakar) ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯರ ತಂಡದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿಪಿಐ ಇಲ್ಲಾಳ್ ಮೇಲೆ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಸಂಸದ ಜಾಧವ್ ಭೇಟಿ
ಈ ನಡುವೆ ಎಸ್‌ಎಂ ಕೃಷ್ಣ ನಿವಾಸದಿಂದ ಸಂದೇಶ ಬಂದಿದ್ದು, ಎಸ್‌ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ ನಂತರ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಊಹಾಪೊಹದ ಮಾಹಿತಿಗಳಿಗೆ ಕಿವಿಗೊಡದಂತೆ ಎಸ್‌ಎಂಕೆ ಪರವಾಗಿ ಕೊರುತ್ತೇವೆ ಎಂಬುದಾಗಿ ಸಂದೇಶ ರವಾನೆ ಮಾಡಲಾಗಿದೆ.