ಬೆಂಗಳೂರು: ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣ (SM Krishna) ಅವರ ಅಂತ್ಯಕ್ರಿಯೆಯ ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ (Madduru) ಸೋಮನಹಳ್ಳಿಯಲ್ಲಿ(Somanahalli) ನಡೆಯಲಿದೆ ಎಂದು ದೀರ್ಘಕಾಲದ ಒಡನಾಡಿಗಳು, ಸಂಬಂಧಿ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2:30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
Advertisement
Advertisement
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿ ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ನಾಳೆ ಬೆಳಗ್ಗೆ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ತರಲಾಗುತ್ತದೆ. ಇಲ್ಲಿಯ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ.