ಹಾಸನ: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) (Patel Shivaram) ವಿಧಿವಶರಾಗಿದ್ದಾರೆ.
ನಗರದ (Hassan) ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2010-2016 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆಸಲ್ಲಿಸಿದ್ದರು. ಅಲ್ಲದೇ ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
Advertisement
Advertisement
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (H.D Devegowda ) ಹಾಗೂ ಅವರ ಕುಟುಂಬಕ್ಕೆ ಪಟೇಲ್ ಆಪ್ತರಾಗಿದ್ದರು. ಈ ಮೂಲಕ ಹಾಸನ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಜೆಡಿಎಸ್‌ನಲ್ಲಿ (JDS) ಸಕ್ರಿಯರಾಗಿದ್ದರು.