ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.
ಪ್ರಕರಣ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು ಹಿಡಿದುಕೊಂಡು ಹೋಗಿದ್ದಾನೆಂದರೆ ಅಲ್ಲಿನ ಭದ್ರತಾ ವ್ಯವಸ್ಥೆ ಸರಿಯಲ್ಲ ಎಂದರ್ಥ ಅಂತ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
Advertisement
Advertisement
ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲೂ ತಪಾಸಣೆ ಮಾಡಿಯೇ ಮಾಡುತ್ತಾರೆ. ಅಂತದ್ದರಲ್ಲಿ ಒಂದು ಲೋಕಾಯುಕ್ತ ಕಚೇರಿಗೆ ಬರುವಾಗ ವ್ಯಕ್ತಿಯೋರ್ವ ಚಾಕು ಹಿಡಿದುಕೊಂಡು ಬರುತ್ತಾನೆ ಎಂದರೆ ಇದು ವಿಪರ್ಯಾಸವೇ ಸರಿ ಅಂತ ಅವರು ಹೇಳಿದ್ರು.
Advertisement
ಏನಿದು ಘಟನೆ?: ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ನ್ಯಾ. ವಿಶ್ವನಾಥ್ ಶೆಟ್ಟಿಯವರು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ತೇಜ ರಾಜ ಶರ್ಮಾ ಎಂಬಾತ ಏಕಾಏಕಿ ಕಚೇರಿಗೆ ನುಗಿ ಲೋಕಾಯುಕ್ತರ ಕಿಬ್ಬೊಟ್ಟೆಗೆ ಮೂರು ಬಾರಿ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಲೋಕಾಯುಕ್ತ ಕೂಡಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
Advertisement
ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶ್ವನಾಥ್ ಶೆಟ್ಟಿ ಅವರನ್ನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆಸ್ಪತ್ರೆಗೆ ದೌಡಾಯಿಸಿದ್ದು, ಆರೋಗ್ಯ ವಿಚಾರಿಸುತ್ತಿದ್ದಾರೆ.