ಮಂಡ್ಯ: ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಸಚಿವ ಅಂಬರೀಶ್ ಸಾಂತ್ವನ ಹೇಳಿದ್ದಾರೆ.
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಚಾಲಕರೂ ಅದೇ ಮಾರ್ಗವಾಗಿ ನಿತ್ಯವೂ ಬಸ್ ಚಾಲನೆ ಮಾಡುತ್ತಾರೆ. ಹೀಗಿರುವಾಗ ಅಪಾಯದ ಸ್ಥಳ ಅರಿತು ಚಾಲನೆ ಮಾಡಬೇಕಿತ್ತು. ಆದರೆ ಅಪಘಾತಕ್ಕೆ ಸೂಕ್ತ ಕಾರಣವೇನು ಅಂತಾ ತಿಳಿದಿಲ್ಲ. ಒಂದು ವೇಳೆ ಚಾಲಕನ ತಪ್ಪಿದ್ದರೆ ಖಾಸಗಿ ಬಸ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಮುಂದಾದರೆ ಕೆಲವರು ಪ್ರತಿಭಟನೆಗೆ ಇಳಿಯುತ್ತಾರೆ. ನೀರಾವರಿ ಭೂಮಿಯನ್ನು ರಸ್ತೆ ಕಾಮಗಾರಿಗೆ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಾರೆ. ಇಂತಹ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಚರ್ಚೆ ನಡೆಸಿ, ಮುಂದೆ ಇಂತಹ ಅನಾಹುತಗಳು ಆಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.
ಅಪಘಾತದಲ್ಲಿ ಒಬ್ಬ ಬಾಲಕ ಹಾಗೂ ಯುವಕ ಬದುಕುಳಿದಿದ್ದಾರೆ. ಅಪಘಾತದ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ನಿಂದ ಹೊರ ಬಂದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಚಾಲಕನ ತಪ್ಪಿದ್ದರೆ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು. ಹಳೇ ಬಸ್ ಗಳನ್ನು ಅಪಘಾತಕ್ಕೆ ಕಾರಣ ಎನ್ನುವುದು ಅವರಿಗೆ ಅರ್ಥ ಮಾಡಿಸಬೇಕು ಎಂದು ಅಂಬರೀಶ್ ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv