ಯಾದಗಿರಿ: ಸೋಮವಾರದೊಳಗೆ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡುವುದು 100ಕ್ಕೆ 100ರಷ್ಟು ಸತ್ಯ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ.
ಮುಂಬೈನಲ್ಲಿ ಕಾಂಗ್ರೆಸ್ ಅತೃಪ್ತ ಶಾಸಕರ ಹೊಣೆ ಹೊತ್ತಿರುವ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಚಿಂಚೊಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿರುತ್ತಾರೆ. ಜಾಧವ್ ಅವರು ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
Advertisement
Advertisement
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಕೀರ್ತಿ ಪತಾಕೆ ಹಾರಿಸೋದೆ ನಮ್ಮ ಗುರಿಯಾಗಿದೆ. ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿಯೇ ನೀಡುತ್ತಾರೆ. ಜಾಧವ್ ಅವರನ್ನು ಅನರ್ಹಗೊಳಿಸಿದ್ರೆ ನಮಗೂ ಕಾನೂನು ಗೊತ್ತು. ಮುಂದಿನ ವಾರ ಬಿಎಸ್ ಯಡಿಯೂರಪ್ಪ ಗುರುಮಠಕಲ್ ಕ್ಷೇತ್ರಕ್ಕೆ ಬರುತ್ತಾರೆ ಎಂದು ಅವರು ಹೇಳಿದ್ದಾರೆ.
Advertisement
ರಾಜ್ಯ ಉಗ್ರಾಣ ನಿಗಮಕ್ಕೆ ಉಮೇಶ್ ಜಾಧವ್ ನೇಮಕಾತಿಯನ್ನ ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಉಮೇಶ್ ಜಾಧವ್ ಬದಲಾಗಿ ಉಗ್ರಾಣ ನಿಗಮಕ್ಕೆ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್‍ರನ್ನ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.
Advertisement
ಫೆಬ್ರವರಿ 17ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲೇ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಲಬುರಗಿ ಮೀಸಲು ಲೋಕಸಭಾ ಚುನಾವಣೆ ಸಿದ್ಧತೆ ನಡೆಸಲಿದ್ದು, ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಹಣಿಸಲು ಮುಂದಾಗಲಿದ್ದಾರೆ ಎಂಬುದಾಗಿ ಮಾಹಿತಿ ಲಭಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv