ಬೆಂಗಳೂರು: ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರ ತಾಯಿ ಸುಶೀಲಮ್ಮ(92) ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ (ಸೆ.23) ವಿಧಿವಶರಾಗಿದ್ದಾರೆ.
ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್ ಸಲ್ಲಿಕೆಗೆ ಪೊಲೀಸರ ಚಿಂತನೆ
ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ #ನನ್ನಮ್ಮ, ಎಲ್ಲರ #ಸುಶೀಲಮ್ಮ_ಟೀಚರ್…ಇನ್ನಿಲ್ಲ.
ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು. pic.twitter.com/BN9rQqvUxa
— S.Suresh Kumar (@nimmasuresh) September 23, 2025
ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

