Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ

Chikkamagaluru

ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ

Public TV
Last updated: November 7, 2023 7:59 am
Public TV
Share
2 Min Read
D. B. Chandregowda
SHARE

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ‌ ಸಂಸ್ಕಾರ ನೆರವೇರಿಸಲಾಗುವುದು.

Indira gandhi

ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ (D.B.Chandregowda) ಅವರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.

ಮೂರು ಬಾರಿ ಶಾಸಕರು, ಮೂರು ಸಲ ಸಂಸದರು, ಒಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ (Indira Gandhi) ರಾಜಕೀಯ ಮರು ಹುಟ್ಟು ನೀಡಲು ರಾಜೀನಾಮೆ ನೀಡಿದ್ದರು. ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿ ಸ್ಪರ್ಧೆಗೆ ಚಂದ್ರೇಗೌಡರು ಅವಕಾಶ ಮಾಡಿಕೊಟ್ಟಿದ್ದರು.

D. B. Chandregowda 1

ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ, ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26 ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ವಕೀಲರಾಗಿ ವೃತ್ತಿ ಆರಂಭಿಸಿದ್ದರು.

ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81 ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. 1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶ ಪಡೆದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ 1999 ರಿಂದ 2004ರ ವರೆಗೆ ಎಸ್.ಎಂ. ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2009ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

TAGGED:ChikkamagaluruD. B. ChandregowdaIndira Gandhiಇಂದಿರಾ ಗಾಂಧಿಚಿಕ್ಕಮಗಳೂರುಡಿ.ಬಿ.ಚಂದ್ರೇಗೌಡ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
2 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
16 minutes ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
17 minutes ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
37 minutes ago
Pushpa Arunkumar
Districts

ಹಾಸನ | ಸೈಟ್ ಜಟಾಪಟಿ – ಎಸ್ಪಿಗೆ ದೂರು ನೀಡಿದ ಯಶ್ ತಾಯಿ

Public TV
By Public TV
45 minutes ago
DK Suresh
Bengaluru City

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ: ಡಿಕೆಸು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?