ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.
ಮೋದಿ ಅವರಿಗಾಗಿ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿದರು. ಈ ವೇಳೆ ಜಿ.ಟಿ ದೇವೇಗೌಡ ಸೇರಿದಂತೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣ ರವರೊಂದಿಗೆ , ಶಾಸಕರುಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಪುಟ್ ಪಾತ್ ತೆರವು ಕಾರ್ಯಾಚರಣೆಯನ್ನು ವೀಕ್ಷಿಸಲಾಯಿತು. pic.twitter.com/oIK3EltPST
— Pratap Simha (@mepratap) September 17, 2019
ಜಿ.ಟಿ ದೇವೇಗೌಡ ಅವರು ಬಿಜೆಪಿ ನಾಯಕರ ಜೊತೆ ಪೂಜೆಯಲ್ಲಿ ಭಾಗಿಯಾದರು. ಅಲ್ಲದೆ ನರೇಂದ್ರ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಹೆಸರಿನಲ್ಲಿ ಅರ್ಚನೆ ಕೂಡ ಮಾಡಿಸಿದರು. ಸದ್ಯ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಯಕರು ಮೋದಿಗೆ ಶುಭ ಹಾರೈಸಿದರು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು 69ನೇ ವಸಂತಕ್ಕೆ ಕಾಲಿಟ್ಟಿದ್ದು ಸಂತಸದಿಂದ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜನ್ಮದಿನದ ಖುಷಿಯಲ್ಲಿರುವ ಮೋದಿ ಅವರು ಇಂದು ಗುಜರಾತ್‍ಗೆ ತೆರಳಿ, ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಗಾಂಧಿನಗರದಿಂದ ನರ್ಮದಾ ಜಿಲ್ಲೆಯಲ್ಲಿರುವ ಕೆವಡಿಯಾ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಅಲ್ಲಿ ನರ್ಮದಾ ನದಿ ತೀರದಲ್ಲಿರುವ ಏಕತಾ ಪ್ರತಿಮೆ ಹಾಗೂ ಸರ್ದಾರ ಸರೋವರ್ ಡ್ಯಾಂ ಯೋಜನೆ, ಕಾರ್ಯಕ್ರಮಗಳನ್ನು ಪರಿಶೀಲಿಸಲಿದ್ದಾರೆ. ಈ ಪ್ರವಾಸದಲ್ಲಿ ಮೋದಿ ಅವರು ನರ್ಮದಾ ನದಿಗೆ ಪೂಜೆ ಸಲ್ಲಿಸಲ್ಲಿದ್ದಾರೆ. ಜೊತೆಗೆ ಸರ್ದಾರ್ ಸರೋವರ ಡ್ಯಾಂ ನಿಯಂತ್ರಣ ಕೊಠಡಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.