-ಕಾನೂನಿನ ಬಗ್ಗೆ ಗೌರವ, ದೇವರ ಮೇಲೆ ನಂಬಿಕೆ ಇದೆ
ಮಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D. Revanna) ಟೆಂಪಲ್ ರನ್ ಮುಂದುವರಿದಿದ್ದು, ಇಂದು (ಮೇ 27) ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ (Sri Manjunatheshwara Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸರ್ವ ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು (Veerendra Heggade) ಭೇಟೆಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಮಧ್ಯರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ರೆಮಲ್ ಸೈಕ್ಲೋನ್ – ರೈಲು, ವಿಮಾನ ಹಾರಾಟ ಸ್ಥಗಿತ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.
ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರೋ ಬಗ್ಗೆಯೂ ಗೊತ್ತಿಲ್ಲ. ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅಲ್ಲಿಂದ ಅವರು ತೆರಳಿದ್ದಾರೆ.
ಭಾನುವಾರ (ಮೇ 26) ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅತ್ತಿಗೆಯಿಂದ ದೂರ ಇರಿ ಅಂದಿದ್ದಕ್ಕೆ ಮೈದುನನ ಕಲ್ಲಿನಿಂದ ಜಜ್ಜಿ ಕೊಲೆಗೈದ್ರು!