Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಮೂಲ್ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಹೆಚ್.ಡಿ.ರೇವಣ್ಣ ಅವಿರೋಧ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಹಾಮೂಲ್ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಹೆಚ್.ಡಿ.ರೇವಣ್ಣ ಅವಿರೋಧ ಆಯ್ಕೆ

Hassan

ಹಾಮೂಲ್ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಹೆಚ್.ಡಿ.ರೇವಣ್ಣ ಅವಿರೋಧ ಆಯ್ಕೆ

Public TV
Last updated: March 19, 2024 10:50 pm
Public TV
Share
2 Min Read
h.d.revanna
SHARE

ಹಾಸನ: ಹಾಲು ಒಕ್ಕೂಟದ ಅಧ್ಯಕ್ಷರಾಗಿ (Hamul) ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಪುನರಾಯ್ಕೆಯಾಗಿದ್ದಾರೆ. ಈ ಮೂಲಕ 1994 ರಿಂದ ಈವರೆಗೆ ಸತತ 7ನೇ ಬಾರಿಗೆ ರೇವಣ್ಣ ಅವಿರೋಧ ಆಯ್ಕೆಯಾಗುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಕಳೆದ ಮಾ.8 ರಂದು ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ 14 ಮಂದಿ ಡೈರೆಕ್ಟರ್ಸ್‌ ನೂತನವಾಗಿ ಅವಿರೋಧ ಆಯ್ಕೆಯಾಗಿದ್ದರು. ಅದಾದ ಬಳಿಕ ಮಂಗಳವಾರ ಹಾಮೂಲ್ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಎಲ್ಲಾ ನಿರ್ದೇಶಕರು ಸೇರಿ ರೇವಣ್ಣ ಅವರನ್ನೇ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಮೋದಿಗೆ ಸಿದ್ದರಾಮಯ್ಯ ಡಿಚ್ಚಿ

NANDINI MILK 2 1

ರೇವಣ್ಣ ಅವರು 2024 ರಿಂದ 2029 ರವರೆಗೆ ಅಧ್ಯಕ್ಷರಾಗಿರಲಿದ್ದಾರೆ. ನಂತರ ಮಾತನಾಡಿದ ರೇವಣ್ಣ, ಮತ್ತೆ ಐದು ವರ್ಷದ ಅವಧಿಗೆ ನಾನು ಅಧ್ಯಕ್ಷನಾಗಿ ಆಯ್ಕೆಯಾಗಲು ಕಾರಣರಾದ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಪ್ರತಿನಿಧಿಸುವ ಎಲ್ಲಾ ನಿರ್ದೇಶಕರು, ಹಾಲು ಉತ್ಪಾದಕರ ಸಂಘಗಳವರಿಗೆ ಧನ್ಯವಾದ ಹೇಳಿದರು. ಹಾಲು ಒಕ್ಕೂಟದ ಎಲ್ಲರೂ, ಶಾಸಕರ ಸಹಕಾರ, ಮಾರ್ಗದರ್ಶನದಿಂದ ರೈತರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಹಾಸನ ಹಾಲು ಒಕ್ಕೂಟ ಈ ಹಂತಕ್ಕೆ ಬೆಳೆಯಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda), ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಸಹಕಾರ ಕಾರಣ. ಈ ಬಾರಿಯ ಚುನಾವಣೆಗೆ ಯಾವುದೇ ರೀತಿಯಲ್ಲಿ ಖರ್ಚು ಮಾಡದೆ ಎಲ್ಲವೂ ಅವಿರೋಧ ಆಯ್ಕೆಯಾಗಿದೆ. ಹಾಲು ಉತ್ಪಾದನೆಯಲ್ಲಿ ಹಾಮೂಲ್ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು. 1984 ರಿಂದಲೇ ನಾನು ಹಾಮೂಲ್ ನಿರ್ದೇಶಕನಾಗಿದ್ದೆ. 1994 ರಿಂದ ಅಧ್ಯಕ್ಷನಾಗಿ ಡೇರಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು. ಇದನ್ನೂ ಓದಿ: ಕೊಡಗು ಗಡಿಭಾಗಕ್ಕೆ ನಕ್ಸಲ್ ನಾಯಕ ವಿಕ್ರಂ ಗೌಡ, ತಂಡ ಬಂದಿರುವುದು ದೃಢ: ಎಸ್‌ಪಿ ರಾಮರಾಜನ್

ಶ್ರವಣಬೆಳಗೊಳ ಶಾಸಕ ಸಿ.ಎನ್.ಬಾಲಕೃಷ್ಣ, ನೂತನ ಅಧ್ಯಕ್ಷರಾದ ರೇವಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದರು. ಹಾಸನ ಹಾಲು ಒಕ್ಕೂಟದಿಂದ ದಿನವಹಿ 12.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಜಿಲ್ಲೆಯಲ್ಲಿ ಹೈನೋದ್ಯಮ ಅಭಿವೃದ್ಧಿಗೆ ರೇವಣ್ಣ ಅವರ ಕೊಡುಗೆ ಅಪಾರ ಇದೆ. ಇದರಿಂದ ಹಲವು ರೈತರಿಗೆ ವರದಾನವಾಗಿದೆ. ಮುಂದಿನ ದಿನಗಳಲ್ಲಿ ಹಾಮೂಲ್ ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ಏರಲಿ ಎಂದು ಆಶಿಸಿದರು. ಈ ವೇಳೆ ನಿರ್ದೇಶಕರಾದ ಸ್ವಾಮಿಗೌಡ, ನಾರಾಯಣಗೌಡ, ಸತೀಶ್ ಮೊದಲಾದವರಿದ್ದರು.

TAGGED:h d revanna‌HAMULhassanjdsಜೆಡಿಎಸ್ಹಾಮುಲ್‌ಹಾಸನಹೆಚ್‌.ಡಿ.ರೇವಣ್ಣ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 minutes ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
43 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
52 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?