– ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ಗೆ ಪರೋಕ್ಷ ಬೆಂಬಲ
ಕೊಡಗು: ಕೊಡಗಿನವರಿಗೆ (Kodagu) ಕಾಂಗ್ರೆಸ್ (Congress) ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಮಾಜಿ ಸಚಿವ, ಹಿರಿಯ ರಾಜಕಾರಣಿ ಬಿ.ಎ. ಜೀವಿಜಯ (B.A.Jeevijaya) ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು ರಾಜಕಾರಣದಲ್ಲಿ ಅನೇಕ ಬಾರಿ ಎಡವಿ ತಪ್ಪು ದಾರಿಯಲ್ಲಿ ನಡೆದಿದ್ದೇನೆ. ಜನತೆ ಕೊಟ್ಟ ಅವಕಾಶವನ್ನು ದುರುಪಯೋಗ ಮಾಡಿಲ್ಲ. ಕಾಂಗ್ರೆಸ್‌ನಿಂದ ಪ್ರಾರಂಭವಾಗಿ ಕಾಂಗ್ರೆಸ್‌ನಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿ ರಾಜೀನಾಮೆ ಪತ್ರ ನೀಡಿದ್ದೇನೆ. ಇಂತಹ ನಿರ್ಧಾರಕ್ಕೆ ಬರಲು ಕಾರಣರಾದ ಕೆಪಿಸಿಸಿ ಅಧ್ಯಕ್ಷರಿಗೆ ಧನ್ಯವಾದ ಎಂದು ಕುಟುಕಿದರು. ಇದನ್ನೂ ಓದಿ: ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್ ಗ್ರೇಟ್ ಎಸ್ಕೇಪ್
ಯಾವ ಪಕ್ಷದ ಹಂಗೂ ಇಲ್ಲ. ಸತ್ವ ಇಲ್ಲದ ತತ್ವಗಳು ಸಿದ್ಧಾಂತಗಳು ಮಾಯವಾಗಿದೆ. ಬೇರೆ ಜಿಲ್ಲೆಯ ಅಭ್ಯರ್ಥಿ ಬೇಡ ಎಂದಿದ್ದೆ. ನನ್ನ ಪತ್ರಕ್ಕೆ ಕವಡೆ ಕಾಸಿನ ಬೆಲೆ ಸಿಕ್ಕಿಲ್ಲ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ತಂದೆ ಒಂದು ಪಕ್ಷ, ಮಗ ಮತ್ತೊಂದು ಪಕ್ಷ. ಕೊಡಗಿನವರೇ ಇಲ್ಲಿ ಗೆಲ್ಲಬೇಕು. ನನಗೆ ಅಥವಾ ಚಂದ್ರಮೌಳಿಗೆ ಟಿಕೆಟ್ ಕೊಡಬೇಕು ಎನ್ನುವ ಶಿಫಾರಸು ಇತ್ತು. ಆದರೆ ನಮ್ಮ ಅಭಿಪ್ರಾಯ ಆಲಿಸದೆ ಹೊರಗಿನವರಿಗೆ ಟಿಕೆಟ್ ಕೊಟ್ಟರು. ನಮ್ಮಂತಹವರು ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ನನಗೆ ಫೋನ್ ಮಾಡಿದ್ರು. ಆದರೆ ಪಕ್ಷದ ವಿಚಾರದ ಬಗ್ಗೆ ಏನೂ ಮಾತನಾಡಿಲ್ಲ. ಅಲ್ಲದೇ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಆಕಸ್ಮಿಕವಾಗಿ ಸಿಕ್ಕರು. ಕೊನೆ ಚುನಾವಣೆ ಎಂದರು. ಶಾಸಕರಾಗುವುದು ಬಿಜೆಪಿಗೆ ಮಾತ್ರವಲ್ಲ ಎಲ್ಲರಿಗೂ ನೀವೇ ಶಾಸಕರು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದೆ, ಅವರು ಒಪ್ಪಿದರು. ಅವರಿಗೆ ಬೆಂಬಲ ಕೊಟ್ಟರೆ ತಪ್ಪೇನು ಎಂಬ ಭಾವನೆ ಇದೆ ಎಂದು ಪರೋಕ್ಷವಾಗಿ ರಂಜನ್‌ಗೆ ಬೆಂಬಲ ಸೂಚಿಸಿದರು. ಇದನ್ನೂ ಓದಿ: PublicTV Explainer: ಮತ ಪ್ರಮಾಣ ಹೆಚ್ಚಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಏರಿಲ್ಲ ಯಾಕೆ?
ಕೊಡಗಿನಲ್ಲಿ ಕಾಂಗ್ರೆಸ್‌ನ ಭದ್ರಕೋಟೆಗೆ ಮೊದಲು ಪೆಟ್ಟು ನೀಡಿದ್ದೇ ಬಿ.ಎ. ಜೀವಿಜಯ. 1983 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರನ್ನು ಮಣಿಸಿ ಗಮನ ಸೆಳೆದಿದ್ದರು.