ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಅವರು ಬೆಂಗಳೂರಿನ (Bengaluru) ಖಾಸಗಿ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ಬಣದಲ್ಲಿರುವ ರಾಜಣ್ಣ ಡಿಕೆಶಿ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋ ಪರಿಸ್ಥಿತಿ ಉದ್ಭವವಾಗಲ್ಲ: ರಾಜಣ್ಣ ಬಾಂಬ್
ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ಅವರು, ಡಿಕೆಶಿ ಸಿಎಂ ಆದರೆ ನಾನು ಸಂಪುಟ ಸೇರುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅವರು ಸಿಎಂ ಆದಾಗ ಆ ಪ್ರಶ್ನೆ ಏಳುತ್ತದೆ. ನಾನು ಕಾಂಗ್ರೆಸ್‌ನಲ್ಲೇ ಇದ್ದವನು. ಪಕ್ಷ ನನಗೆ ಏನು ಮಾಡಿಲ್ಲ ಆದರೆ ಕೆಲವರು ಷಡ್ಯಂತ್ರ ಮಾಡಿದ್ದಾರೆ ಎಂದು ಯಾರ ಹೆಸರನ್ನು ಉಲ್ಲೇಖಿಸದೇ ದೂರಿದ್ದರು.

