ಉಡುಪಿ/ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
Advertisement
ಈ ಹಿಂದೆ ಪ್ರಮೋದ್ ಮಧ್ವರಾಜ್ ಮೀನುಗಾರಿಕಾ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಮಾಜಿ ಸಚಿವರಾಗಿ ಸೇವೆ ಸಲ್ಲಿದ್ದರು. ಆದರೆ ಈಗ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಈ ಪತ್ರದ ಮೂಲಕ ಅವರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಮತದಾರರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್
Advertisement
Advertisement
ಬಿಜೆಪಿ ಸೇರ್ಪಡೆ
ಪ್ರಮೋದ್ ಅವರು ಮಧ್ಯಾಹ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದು, ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Advertisement
ಪತ್ರದಲ್ಲಿ ಏನಿದೆ?
ಇತ್ತೀಚೆಗೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ನಿಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಹಿಂದೆ ನನ್ನ ಸಮಯ ಮತ್ತು ದುಡಿದ ಹಣವನ್ನು ಪಕ್ಷಕ್ಕಾಗಿ ವ್ಯಯಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ನನ್ನ ವಿನಮ್ರ ಕೊಡುಗೆಗಳನ್ನು ನೀವು ಮತ್ತು ಪಕ್ಷವು ಅರಿತುಕೊಂಡಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷವು ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ವಿವಿಧ ಹುದ್ದೆಗಳನ್ನು ನೀಡುವ ಮೂಲಕ ಪ್ರತಿಫಲವನ್ನು ನೀಡಿದೆ.
ಚುನಾಯಿತ ಪ್ರತಿನಿಧಿಯಾಗಿ ನಾನು ನನ್ನ ಕ್ಷೇತ್ರ, ಜಿಲ್ಲೆ ಮತ್ತು ರಾಜ್ಯಕ್ಕಾಗಿ ನನ್ನ ಸಾಮಥ್ರ್ಯಕ್ಕೆ ತಕ್ಕಂತೆ ಸಮರ್ಪಣಾಭಾವ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ದಕ್ಷ ಸಂಸ್ಥೆ ಸಮೀಕ್ಷೆಯನ್ನು ನಡೆಸಿತು ಮತ್ತು ನಾನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಮತ್ತು ನಂಬರ್ 1 ಶಾಸಕನಾಗಿ ಸ್ಥಾನ ಪಡೆದಿದ್ದೆ. ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಉಸಿರುಗಟ್ಟುವಿಕೆಗೆ ಕಾರಣವಾದ ಪರಿಸ್ಥಿತಿಯು ನನಗೆ ಕೆಟ್ಟ ಅನುಭವವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ.
ಈ ಸಂಗತಿಗಳನ್ನು ನಿಮ್ಮ ಗಮನಕ್ಕೆ ತರಲಾಗಿದೆ ಮತ್ತು ಇತರ ಪಕ್ಷದ ಮುಖಂಡರಿಗೆ ತಿಳಿಸಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಪ್ರಚಲಿತ ಪರಿಸ್ಥಿತಿಯ ಬಗ್ಗೆ ನನ್ನ ಅಸಮಾಧಾನವನ್ನು ನಿವಾರಿಸಲು ಪಕ್ಷದಿಂದ ಯಾವುದೇ ಪ್ರಯೋಜನಕಾರಿ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ಮೇಲೆ ವಿವರಿಸಿದ ಸಂದರ್ಭಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದು ಮತ್ತು ಇತ್ತೀಚೆಗೆ ನನಗೆ ನಿಯೋಜಿಸಲಾದ ಹೊಸ ಹುದ್ದೆಗೆ ನ್ಯಾಯ ಸಲ್ಲಿಸುವುದು ಅಸಾಧ್ಯವಾಗುವ ಹಂತವನ್ನು ತಲುಪಿದೆ.
ಕೆಪಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಸ್ವೀಕರಿಸದಿರಲು ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈ ಪತ್ರದ ಮೂಲಕ ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಪಕ್ಷದ ಕಾರ್ಯಕರ್ತರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಬಿಜೆಪಿ ಸೇರ್ಪಡೆ ಕಾರ್ಯಕ್ರಮ
ಕೋಲಾರ ಮತ್ತು ಮಂಡ್ಯದ ಪ್ರಮುಖ ನಾಯಕರು ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮ ಖಾಸಗಿ ಹೋಟೆಲ್‍ನಲ್ಲಿ ನಡೆದಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ.
ಮಾಜಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಡಿ.ಜಯರಾಂ ಪುತ್ರ ಅಶೋಕ್ ಜಯರಾಂ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಜೆಡಿಎಸ್ ತೊರೆದು ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಅಶೋಕ್ ಜಯರಂ ಸಹ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಾಗಮಂಗಲ ಕ್ಷೇತ್ರದಿಂದ ಟಿಕೆಟ್ ಬಯಸಿ ಲಕ್ಷ್ಮಿ ಅಶ್ವಿನ್ ಗೌಡ, ಮಂಡ್ಯ ಕ್ಷೇತ್ರದಿಂದ ಟಿಕೆಟ್ ಬಯಸಿ ಅಶೋಕ್ ಜಯರಾಂ, ಕೋಲಾರದಿಂದ ಟಿಕೆಟ್ ಬಯಸಿರುವ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಲೂರು ಕ್ಷೇತ್ರದಿಂದ ಟಿಕೆಟ್ ಬಯಸಿರುವ ಜೆಡಿಎಸ್ ಮಾಜಿ ಶಾಸಕ ಮಂಜುನಾಥ್ ಗೌಡ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸಂದೇಶ್ ನಾಗರಾಜ್ ಸಹ ಇಂದೇ ಬಿಜೆಪಿ ಸೇರ್ಪಡೆಯಾದರು. ಸಂದೇಶ್ ನಾಗರಾಜ್ ಸಹ ಇಂದೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್
ಸದ್ಯದಲ್ಲೇ ಬಿಜೆಪಿ ಸೇರಲಿರುವ ಅಂಬರೀಶ್ ಆಪ್ತ ಸಚ್ಚಿದಾನಂದ ಅವರಿಗೆ ಶ್ರೀರಂಗಪಟ್ಟಣದಲ್ಲಿ ಬಿಜೆಪಿಯ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಸದ್ಯದಲ್ಲೇ ಇವರು ಬೃಹತ್ ಸಮಾವೇಶ ಮಾಡುವ ಮೂಲಕ ಶ್ರೀರಂಗಪಟ್ಟಣದಲ್ಲೇ ಬಿಜೆಪಿ ಸೇರಲಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿ.ಪಿ.ಯೋಗೀಶ್ವರ್, ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಗೋಪಾಲಯ್ಯ, ಮಾಲೂರು ಮಂಜುನಾಥ್ ಗೌಡ, ವರ್ತೂರು ಪ್ರಕಾಶ್, ಸಚಿವ ನಾರಾಯಣ ಗೌಡ ಆಗಮಿಸಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ, ಸಚಿವರಾದ ಅಶೋಕ್, ಸುಧಾಕರ್, ಸೋಮಶೇಖರ್, ಗೋಪಾಲಯ್ಯ, ನಾರಾಯಣ ಗೌಡ, ಮುನಿರತ್ನ, ಸಂಸದ ಮುನಿಸ್ವಾಮಿ ಉಪಸ್ಥಿತಿಯಲ್ಲಿದ್ದರು.