ಬೆಂಗಳೂರು: ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಮಾನ ಮರ್ಯಾದೆ ಇದ್ರೆ ರಾಜಿನಾಮೆ ಕೊಟ್ಟು ಹೋಗಬೇಕು ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ರಾಜಭವನ ಚಲೋ ಪ್ರತಿಭಟನೆ ವೇಳೆಯಲ್ಲಿ ಭಾಗಿಯಾಗಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಾಜಿ ಸಚಿವರು, ಈಗಾಗಲೇ ಸುಪ್ರೀಂ ಕೋರ್ಟ್ ಶನಿವಾರ ಸಂಜೆ 4 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ನಾವು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡುತ್ತೇವೆ. ನಮ್ಮ ಪಕ್ಷ ಹಾಗು ಜೆಡಿಎಸ್ ನಿಂದ ಟಿಕೆಟ್ ಪಡೆದು ಗೆಲುವು ಸಾಧಿಸಿರುವ ನಮ್ಮ ಶಾಸಕರು ಬಿಜೆಪಿಗೆ ಹೋಗಲ್ಲ ಅಂತಾ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.
Advertisement
Advertisement
ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಇಂದು ಕಾಂಗ್ರೆಸ್ ನಾಯಕರು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್‍ನ ರಾಜ್ಯ ಹಾಗು ಕೇಂದ್ರದ ನಾಯಕರು ರಾಜಭವನ ಚಲೋ ಚಳುವಳಿಗೆ ಚಾಲನೆ ಕೊಟ್ಟಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್‍ನ ಕೇಂದ್ರ ನಾಯಕರಾದ ಗುಲಾಂನಬೀ ಆಜಾದ್, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲ ನಾಯಕರು ಮುಂದಾಗಿದ್ದಾರೆ.
Advertisement
ಸುಪ್ರೀಂ ಕೋರ್ಟ್ ನ ತ್ರಿಸದ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಶನಿವಾರ 4 ಗಂಟೆಯ ಒಳಗಡೆ ಬಹುಮತವನ್ನು ಸಾಬೀತುಪಡಿಸಬೇಕು. ಅಷ್ಟೇ ಅಲ್ಲದೇ ಅಂಗ್ಲೋ ಇಂಡಿಯನ್ ನೇಮಕ ಮಾಡುವಂತಿಲ್ಲ. ಇದರ ಜೊತೆಯಲ್ಲಿ ಬಹುಮತ ಸಾಬೀತುಪಡೆಸುವ ವರೆಗೂ ಯಾವುದೇ ಆಡಳಿತಾತ್ಮಕ ನಿರ್ಧಾರವನ್ನು ಬಿಎಸ್ ಯಡಿಯೂರಪ್ಪನವರನ್ನು ಪ್ರಕಟಿಸುವಂತಿಲ್ಲ ಎಂದು ಆದೇಶಿಸಿದೆ.
Advertisement
ಸುಪ್ರೀಂ ಆದೇಶವನ್ನು ಬಿಜೆಪಿ ಸ್ವಾಗತಿಸಿದ್ದು, ನಮಗೆ ಸಂಖ್ಯಾಬಲವಿದ್ದು ಬಹುಮತವನ್ನು ಸಾಬೀತು ಪಡಿಸುತ್ತೇವೆ ಎಂದು ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.