ಕಲಬುರಗಿ: ಮಾಜಿ ಸಚಿವ ರೇವುನಾಯಕ್ ಬೆಳಮಗಿ ಅವರ ಕಾರು ಶನಿವಾರ ರಾತ್ರಿ ಅಪಘಾತಕೊಳ್ಳಗಾಗಿದ್ದು, ಬೆಳಮಗಿ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಬಳಿ ಮಾಜಿ ಸಚಿವರ ಕಾರು ಅಪಘಾತಕ್ಕೆ ಒಳಗಾಗಿದೆ. ಕಲಬುರಗಿಯಿಂದ ಬೆಳಮಗಿ ಬರುವ ವೇಳೆಯಲ್ಲಿ ರಸ್ತೆಯಲ್ಲಿ ನವಿಲು ಬಂದಿದೆ. ನವಿಲನ್ನು ತಪ್ಪಿಸಲು ಹೋದ ಚಾಲಕ ಪಕ್ಕದ ಸೇತುವೆಗೆ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ.
ಬೆಳಮಗಿ ಅವರ ತಲೆ ಮತ್ತು ಬೆನ್ನಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಸದ್ಯ ಬೆಳಮಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕರ್ತರು ಆತಂಕ ಪಡುವ ಅವಶ್ಯಕತೆಯಿಲ್ಲ. ನಾನು ಚೆನ್ನಾಗಿದ್ದೇನೆ ಎಂದು ಮಾಜಿ ಸಚಿವ ರೇವುನಾಯಕ್ ಬೆಳಮಗಿ ಹೇಳಿದ್ದಾರೆ.
ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.