ಮೈಸೂರು: ನಟ ದರ್ಶನ್ ನಮ್ಮ ಜಿಲ್ಲೆಯವರು, ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈ ಘಟನೆಯಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ (Sara Mahesh) ಹೇಳಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಬಂಧನ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನಮ್ಮ ಜಿಲ್ಲೆಯವರು. ಸಾಕಷ್ಟು ಎತ್ತರಕ್ಕೆ ಬೆಳೆದು ಒಳ್ಳೆಯ ಹೆಸರು ಮಾಡಿದ್ದರು. ಆದರೆ ಇದೀಗ ಘಟನೆಯಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ. ಪ್ರಕರಣದಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಈ ರೀತಿಯ ಘಟನೆ ನಡೆಯಬಾರದಿತ್ತು ಎಂದರು.
ರಾಜ್‍ಕುಮಾರ್, ಯಶ್, ಸುದೀಪ್, ಶಿವಕುಮಾರ್ ಇವರೆಲ್ಲರಿಗೂ ಅಭಿಮಾನಿಯಾಗಿದ್ದೆ. ದರ್ಶನ್ ನಮ್ಮ ಜಿಲ್ಲೆಯವರು ಎನ್ನುವ ಕಾರಣಕ್ಕೆ ಅವೆ ಮೇಲೆ ವಿಶೇಷ ಅಭಿಮಾನ ಇತ್ತು. ದರ್ಶನ್‍ಗೆ ಸಾಕಷ್ಟು ಜನ ಅಭಿಮಾನಿಗಳು ಇದ್ದಾರೆ. ನನಗೆ ಅಭಿಮಾನ ಅಷ್ಟೇ ಅಲ್ಲ, ವೈಯಕ್ತಿಕವಾಗಿ ಕೂಡ ಸಾಕಷ್ಟು ಬಾರಿ ಮಾತನಾಡಿಸಿದ್ದೆ ಎಂದು ಹೇಳಿದರು.
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿರುವುದು ಸತ್ಯವೇ ಆದರೆ ತಕ್ಕ ಶಿಕ್ಷೆ ಆಗಲಿ ಎಂದು ಸಾರಾ ಮಹೇಶ್ ತಿಳಿಸಿದರು. ಇದನ್ನೂ ಓದಿ: ದರ್ಶನ್ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲಿಗೆ