ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ಮಾಜಿ ಸಚಿವ ವಿ.ಸೋಮಣ್ಣ (V.Somanna) ಮುಂಬರುವ ಲೋಕಸಭಾ ಚುನಾವಣೆ ಸ್ಪರ್ಧೆಗೆ ಕಸರತ್ತು ನಡೆಸುತ್ತಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
ಚುನಾವಣೆ ಸೋಲಿನ ಬಳಿಕ ಸೋಮಣ್ಣ ಅವರು ಬೆಂಗಳೂರಲ್ಲೇ ಮುಂದಿನ ರಾಜಕೀಯ ಎಂಬ ಸಂದೇಶ ರವಾನಿಸುವ ಸೂಚನೆ ಕೊಟ್ಟಿದ್ದಾರೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆ ಸಾಕ್ಷಿ ಎಂಬಂತಿದೆ. ಇದನ್ನೂ ಓದಿ: ಅಮೆಜಾನ್ ಕಾಡಲ್ಲಿ 40 ದಿನಗಳ ಬಳಿಕ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಮಕ್ಕಳು ಡಿಸ್ಚಾರ್ಜ್
Advertisement
Advertisement
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಾರ್ಯಕರ್ತರ ಸಭೆಯಲ್ಲಿ ಭಾವುಕರಾಗಿ ತಮ್ಮ ಮನದ ಇಂಗಿತವನ್ನು ಸೋಮಣ್ಣ ವ್ಯಕ್ತಪಡಿಸಿದ್ದಾರೆ.
Advertisement
ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಮೇಲೆ ಕ್ರಮ ಆಗಲೇಬೇಕು. ಕಾಟಾಚಾರಕ್ಕೆ ನೋಟಿಸ್ ಕೊಟ್ಟು ಸುಮ್ಮನಾದರೆ ನಾನು ಸಹಿಸೋ ಪ್ರಶ್ನೆಯೇ ಇಲ್ಲ. ಪಕ್ಷಕ್ಕೆ ಮೋಸ ಮಾಡುವವರನ್ನು ಸಹಿಸಿಕೊಳ್ಳುವುದು ತಾಯಿಗೆ ದ್ರೋಹ ಮಾಡಿದಂತೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್
Advertisement
ಮತ್ತೊಂದು ಬಾರಿ ನಿಮ್ಮನ್ನೆಲ್ಲಾ ಕರೆದು ಚರ್ಚೆ ನಡೆಸುತ್ತೇನೆ. ಮುಂದೇನು ಮಾಡಬೇಕು ಅನ್ನೋದನ್ನು ಕುಳಿತು ಚರ್ಚೆ ಮಾಡೋಣ ಎಂದು ಕಾರ್ಯಕರ್ತರಿಗೆ ಸೋಮಣ್ಣ ತಿಳಿಸಿದ್ದಾರೆ. ನಮ್ಮ ಬೇಡಿಕೆ ಕುರಿತು ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ತಾರೋ ನೋಡೋಣ ಎಂದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿ ಎರಡರಲ್ಲೂ ಸೋಮಣ್ಣ ಹೀನಾಯ ಸೋಲನುಭವಿಸಿದ್ದರು. ಪಕ್ಷದಲ್ಲಿರುವವರೇ ನನ್ನ ಸೋಲಿಗೆ ಕಾರಣರಾದರು ಎಂದು ಅಸಮಾಧಾನ ಹೊರಹಾಕಿದ್ದರು.
Web Stories