ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ (Former Miss World Contestant Sherika De Armas). ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ 2 ವರ್ಷಗಳಿಂದ ಶೆರಿಕಾ ಅವರು ಕ್ಯಾನರ್ (Cervical Cancer) ನಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು. ಹಲವು ಬಾರಿ ಚಿಕಿತ್ಸೆಗೆ ಒಳಗಾದರೂ ಯಾವುದೇ ಪ್ರಯೋಜನವಾಗಿಲ್ಲ.
ಶೆರಿಕಾ ಅವರು 2015ರಲ್ಲಿ ತನ್ನ ದೇಶ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ಸದ್ಯ ಶೆರಿಕಾ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ; 5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ!
ಮಿಸ್ ಉರುಗ್ವೆ, ಕಾರ್ಲಾ ರೊಮೆರೊ ಅವರು ನನ್ನ ಜೀವನದಲ್ಲಿ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಶೋಕ ವ್ಯಕ್ತಪಡಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]