ಹಾಸನ: ಅರಸೀಕೆರೆ (Arsikere) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್.ಬಸವರಾಜು (75) (A.S Basavaraju) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು (ಗುರುವಾರ) ನಿಧರಾಗಿದ್ದಾರೆ.
2004-2007 ರವರೆಗೆ ಬಿಜೆಪಿಯಿಂದ (BJP) ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಇನ್ನೂ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು.
ಪಕ್ಷ ನಿಷ್ಠರು ಮಾತ್ರವಲ್ಲದೇ ಸಂಘ ನಿಷ್ಠರಾಗಿಯೂ ಬಸವರಾಜು ತಮ್ಮದೇ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದರು. ಮೃತರ ನಿಧನಕ್ಕೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಶುಕ್ರವಾರ ಅರಸೀಕೆರೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.