ಬೆಂಗಳೂರು: ಕಾಂಗ್ರೆಸ್‌ನಿಂದ ವಿಧಾನಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ಬುಧವಾರ ಬಿಜೆಪಿ ಸೇರ್ಪಡೆಗೊಂಡರು.
ನಗರದ ಬಿಜೆಪಿ (BJP) ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಿಜೆಪಿ ಸೇರಿದರು. ಪುಲಿಕೇಶಿನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜತೆ ಅಖಂಡ ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಧ್ವಜ ಕೊಟ್ಟು, ಪಕ್ಷದ ಶಾಲು ಹಾಕಿ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: 500 ವರ್ಷದ ಬಳಿಕ ರಾಮನವಮಿಯಂದು ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಅಭಿಷೇಕ, ಸೂರ್ಯ ತಿಲಕ!
Advertisement
Advertisement
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಿದ್ದು ನಮಗೆ ದೊಡ್ಡ ಬಲ ತಂದಿದೆ. ಎರಡೂವರೆ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲೋದು ನಿಶ್ಚಿತ. ಅಖಂಡ ಮನೆಗೆ ಬೆಂಕಿ ಹಾಕಿದಾಗ ಕಾಂಗ್ರೆಸ್ ಅವರ ಪರ ನಿಲ್ಲಲಿಲ್ಲ. ಅಖಂಡ ಚುನಾವಣೆ ಸಮಯದಲ್ಲಿ ಬಂದಿರೋದ್ರಿಂದ ಶೋಭಾ ಅವರು ದೊಡ್ಡ ಅಂತರದಲ್ಲಿ ಗೆಲ್ಲಲು ಅನುಕೂಲ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
Advertisement
ಬಿಜೆಪಿ ಸೇರಿದ ನಂತರ ಅಖಂಡ ಶ್ರೀನಿವಾಸ್ ಮೂರ್ತಿ ಮಾತನಾಡಿ, ಶ್ರೀರಾಮನವಮಿಯಂದು ಪಕ್ಷ ಸೇರ್ಪಡೆಯಾಗಲು ಅವಕಾಶ ನೀಡಿದ್ದಾರೆ. ನಾನು ಬಿಜೆಪಿ ಸೇರಲು ಕಾರಣ ಶ್ರೀರಾಮನ ಆಶೀರ್ವಾದ. ಯಡಿಯೂರಪ್ಪ, ಶೋಭಕ್ಕ ಆಶೀರ್ವಾದ ಕಾರಣ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ನಾನು ಸಿದ್ಧ. 2018 ರಲ್ಲಿ ಅತಿ ಹೆಚ್ಚು ವೋಟು ಪಡೆದು ಗೆದ್ದವನು ನಾನು. ನನಗೆ ಟಿಕೆಟ್ ತಪ್ಪಿಸಿದ್ದು ಕಾಂಗ್ರೆಸ್. ನನ್ನದಲ್ಲದ ತಪ್ಪಿಗೆ ನನ್ನ ಮನೆ ಸುಟ್ಟು ಹಾಕಿದ್ರು ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ಡಿ.ಕೆ.ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ
Advertisement
ನಮ್ಮ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗಿದ್ದೇವೆ. ಮುಸ್ಲಿಂ ಬಾಂಧವರಿಗೆ ಮನವಿ ಮಾಡ್ತೀನಿ. ಅಮಾಯಕರು ಜೈಲಲ್ಲಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಅದಕ್ಕೆ ನಾನು ಕಾರಣ ಅಲ್ಲ. ನಿಜವಾಗಿ ಬೆಂಕಿ ಹಚ್ಚಿದವರು ಹೊರಗೆ ಓಡಾಡಿಕೊಂಡು, ಪಕ್ಷದಲ್ಲಿ ಪದವಿ ಪಡೆದುಕೊಂಡಿದ್ದಾರೆ. ನನಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ತಪ್ಪಿಸಿದ್ದು ಒಳ್ಳೆಯದಾಯ್ತು. ಇದರಿಂದ ನಾನು ಬಿಜೆಪಿಗೆ ಬರುವಂತಾಗಿದೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ಕೊಡಿಸೋಣ. ನಾವೆಲ್ಲರೂ ಒಗ್ಗಟ್ಟಾಗಿ ಶೋಭಕ್ಕಗೆ ಲೀಡ್ ಕೊಟ್ಟು ಗೆಲ್ಲಿಸೋಣ ಎಂದು ಕರೆ ನೀಡಿದರು.