ಬೆಂಗಳೂರು: ಬಿಜೆಪಿ ತೊರೆದಿದ್ದ ಮಾಜಿ ಶಾಸಕ ಆನಂದ್ ಸಿಂಗ್ ಅವರು ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಬಾವುಟವನ್ನು ಆನಂದ್ ಸಿಂಗ್ ಅವರಿಗೆ ನೀಡುವ ಮೂಲಕ ಪರಮೇಶ್ವರ್ ಅವರು ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ನಾನು ಎರಡು ಬಾರಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೆ. ನಾನು ಸೆಕ್ಯೂಲರ್ ಮೆಂಟಾಲಿಟಿಯವನು. ನನ್ನದು ಸರ್ವರಿಗೂ ಸಮಪಾಲು ಸಮಬಾಳು ತತ್ವ. ಬಳ್ಳಾರಿಯಲ್ಲಿ ನಾವು 9ಕ್ಕೆ 9 ಸ್ಥಾನಗಳನ್ನು ಗೆಲ್ಲುತ್ತೇವೆ. ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಅಂತ ಹೇಳಿದ್ರು.
Advertisement
Advertisement
ರಾಹುಲ್ ಗಾಂಧಿ 10 ರಂದು ಹೊಸಪೇಟೆಗೆ ಬರುತ್ತಾರೆ. ಯಾರೂ ಕಂಡರಿಯದಂತೆ ಆ ಕಾರ್ಯಕ್ರಮ ಮಾಡುತ್ತೇವೆ. ಮುಂದೆ ಕೂಡ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಅಂದ್ರು.
Advertisement
ಆನಂದ್ ಸಿಂಗ್ ಸೇರ್ಪಡೆಗೆ ರಾಹುಲ್ ಗಾಂಧಿ ಸಮ್ಮತಿ ನೀಡಿದ್ದಾರೆ. ಹೊಸಪೇಟೆ ಕ್ಷೇತ್ರದ ಆನಂದ್ ಸಿಂಗ್ ಕ್ರಿಯಾಶೀಲ ಶಾಸಕರಾಗಿದ್ದಾರೆ. ಅನೇಕ ಜನಪರ ಕೆಲಸ ಮಾಡಿದ್ದಾರೆ. ಅವರೊಬ್ಬ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರನ್ನು ಸಂತೋಷದಿಂದ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳುತ್ತಿದ್ದೇವೆ ಅಂತ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
Advertisement
ಈಗಾಗಲೇ ಹಲವು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆನಂದ್ ಸಿಂಗ್ ರಂತೆ ಅವರೂ ಪಕ್ಷಕ್ಕೆ ಬರಲಿದ್ದಾರೆ. ವಿಜಯನಗರದ ಹೊಸ ಪೀಳಿಗೆ ಕಾಂಗ್ರೆಸ್‍ಗೆ ಕಾಲಿಟ್ಟಿದೆ. ವಿಜಯನಗರದ ಸೈನ್ಯ ಈಗ ಕಾಂಗ್ರೆಸ್ ಪರ ಪ್ರಚಾರ ಮಾಡಲಿದೆ. ನೀವು ಒಗ್ಗಟ್ಟಿನ ಪ್ರದರ್ಶನ ಮಾಡಬೇಕು. ನಿಮ್ಮ ಶಕ್ತಿ ಪ್ರದರ್ಶನವನ್ನ ರಾಹುಲ್ ಕಾರ್ಯಕ್ರಮದಲ್ಲಿ ತೋರಿಸಿ ಅಂತ ಸಚಿವ ಡಿ ಕೆ ಶಿವಕುಮಾರ್ ಹೇಳಿದರು.
ಆನಂದ್ ಸಿಂಗ್ ಜೊತೆ ಅವರ ಅನೇಕ ಬೆಂಬಲಿಗರು ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್ ಸಂತೋಷ್ ಲಾಡ್, ಕೆ.ಸಿ.ಕೊಂಡಯ್ಯ ಉಪಸ್ಥಿತರಿದ್ದರು.
ಬಿಜೆಪಿ ತೊರೆಯಲು ಕಾರಣವೇನು?: ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆನಂದ್ ಸಿಂಗ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೇ ಅದನ್ನು ಬಹಿರಂಗವಾಗಿ ಸಮರ್ಥನೆ ಕೂಡ ಮಾಡಿಕೊಂಡಿದ್ದರು. ಇದು ಬಿಜೆಪಿಯವರನ್ನು ಮುಜುಗರಕ್ಕೀಡು ಮಾಡಿತ್ತು. ಹೀಗಾಗಿ ಈ ಕುರಿತು 7 ದಿನಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರು ಶೋಕಾಸ್ ನೊಟೀಸ್ ಜಾರಿ ಮಾಡಿದ್ದರು. ಇದರಿಂದ ಬೇಸರಗೊಂಡ ಆನಂದ್ ಸಿಂಗ್ ಬಿಜೆಪಿ ತೊರೆಯಲು ನಿರ್ಧರಿಸಿದ್ದು, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
https://www.youtube.com/watch?v=UM7pzm4jbzU
https://www.youtube.com/watch?v=oYObRLHynu4