ಪರಿಸರ ಚಟುವಟಿಕೆಯಲ್ಲಿ ತೊಡಗುತ್ತೇನೆ – ಬಿಜೆಪಿಗೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ

Public TV
1 Min Read
Former MLA AT Ramaswamy resigns from BJP

ಬೆಂಗಳೂರು: ಮಾಜಿ ಶಾಸಕ ಎಟಿ ರಾಮಸ್ವಾಮಿ (AT Ramaswamy) ಬಿಜೆಪಿಗೆ (BJP) ರಾಜೀನಾಮೆ ನೀಡಿದ್ದಾರೆ.

ರಾಜ್ಯಾಧ್ಯಕ್ಷ ವಿಜಯೇಂದ್ರಗೆ (BY Vijayendra) ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ (JDS) ತೊರೆದು ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡು  ಬಿಜೆಪಿ ಚಟುವಟಿಕೆಗಳಿಂದ ರಾಮಸ್ವಾಮಿ ದೂರ ಉಳಿದಿದ್ದರು.

AT Ramaswamy

 

ರಾಜೀನಾಮೆ ಪತ್ರದಲ್ಲಿ ಏನಿದೆ?
ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ ನೆರೆ, ಬರ, ಚಂಡಮಾರುತ, ಭೂಕಂಪನಗಳು ಸೃಷ್ಟಿಯಾಗುತ್ತಿವೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ.

ಪರಿಸರ ಉಳಿದರೆ ಜೀವ ಸಂಕುಲಗಳೂ ಉಳಿಯುತ್ತವೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವವೆಂದು ಭಾವಿಸಿರುತ್ತೇನೆ. ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ. ಈ ಬಗ್ಗೆ ಈಗಾಗಲೇ ನಾನು ಏ.11 ರಂದು ದೂರವಾಣಿ ಮೂಲಕ ತಮ್ಮ ಜೊತೆ ಮಾತನಾಡಿರುತ್ತೇನೆ. ಆದುದರಿಂದ ನಾನು ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ತಾವೆಲ್ಲರೂ ತೋರಿದ ಪ್ರೀತಿ ವಿಶ್ವಾಸಕ್ಕೆ ಕೃತಜ್ಞತೆಗಳು.

Share This Article